LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಅಧಿಕಾರ ಮದದಿಂದ ಕೆಟ್ಟದಾಗಿ ನಡೆದುಕೊಳ್ಳುವ ರಾಜ್ಯ ಸರಕಾರ'- ವಿಜಯೇಂದ್ರ ಟೀಕೆ

ಬೆಳಗಾವಿ: ಹಿಂದೆ ಯಾವುದೇ ರಾಜ್ಯ ಸರಕಾರಗಳು ರೈತರ ಹೋರಾಟದ ವಿಚಾರದಲ್ಲಿ ಇಷ್ಟೊಂದು ಕೆಟ್ಟದಾಗಿ ನಡೆದುಕೊಂಡಿರಲಿಲ್ಲ; ಸರಕಾರಕ್ಕೆ ಅಧಿಕಾರದ ಮದ ಏರಿದ್ದು, ಅದರಿಂದ ಈ ರೀತಿ ಮಾಡುತ್ತಿರುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸ್ಥÀರನ್ನು ವಿಜಯೇಂದ್ರ ಹಾಗೂ ಮುಖಂಡರು ಭೇಟಿ ಮಾಡಿದರು.

ಬಳಿಕ ವಿಜಯೇಂದ್ರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಬ್ಬು ಬೆಳೆಗಾರರ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಆ ಕುಟುಂಬದ ಕುರಿತು ಗಮನಿಸಬೇಕು ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರವು ಕಬ್ಬು ಬೆಳೆಗಾರರ ವಿಚಾರದಲ್ಲಿ ಸರಕಾರವು ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ವರ್ತಿಸುತ್ತಿತ್ತು. ಇದನ್ನು ಗಮನಿಸಿ ನಾನು ಮತ್ತು ಪಕ್ಷದ ನಾಯಕರು ಹೋರಾಟದಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ನಿನ್ನೆ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ಇವತ್ತು ಕೂಡ ಹೋರಾಟದಲ್ಲಿ ಭಾಗವಹಿಸಿದ್ದೇವೆ. ಈ ಮೂಲಕ ಧೈರ್ಯ ತುಂಬಿಸಲು ಪ್ರಯತ್ನಿಸಿದ್ದಾಗಿ ವಿವರಿಸಿದರು. ಹೆಚ್ಚಿನ ಪ್ರಚಾರ ನೀಡಿದ ಮಾಧ್ಯಮಗಳನ್ನು ಅವರು ಅಭಿನಂದಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026