LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ತಯಾರಿಲ್ಲ'- ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷದ ಸಮೀಪ ಬಂದಿದೆ. ಎರಡು ವರ್ಷ ತಲೆ ಕೆಡಿಸಿಕೊಂಡಿಲ್ಲ. ಈಗ ಕೋವಿಡ್ ಕುರಿತಂತೆ ಮಧ್ಯಂತರ ವರದಿ ತೆಗೆದುಕೊಂಡು ಅದರ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿ, ಅದನ್ನು ಅಧಿವೇಶನದಲ್ಲಿ ಚರ್ಚಿಸಲು ಸರಕಾರ ಬಯಸುತ್ತಿದೆ ಎಂದರೆ, ಸದನವನ್ನು ದಿಕ್ಕು ತಪ್ಪಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ಅಧಿವೇಶನದಲ್ಲಿ ಮುನಿರತ್ನ, ಯಡಿಯೂರಪ್ಪ ಅವರ ವಿಚಾರವಾಗಿ, ಕೋವಿಡ್ ಕುರಿತಂತೆ ಚರ್ಚಿಸಬೇಕೆಂದು ಚಿಂತಿಸುತ್ತಿರುವ ಬಗ್ಗೆ ಪತ್ರಿಕಾವರದಿ ಬಂದಿದೆ. ಕೋವಿಡ್ ಸಂಬಂಧ ಮೈಕೆಲ್ ಡಿಕುನ್ಹ ಅವರ ಮಧ್ಯಂತರ ವರದಿ ತರಿಸಲು ಏನು ಆತುರವಿತ್ತು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರವು ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯವನ್ನು ಸಂಪೂರ್ಣವಾಗಿ ವ್ಯರ್ಥ ಮಾಡುತ್ತಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರಕಾರ ತಯಾರಿಲ್ಲ ಎಂದು ಟೀಕಿಸಿದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರು, ಶಿಶುಗಳ ಸಾವಿನ ಕುರಿತು ಚರ್ಚಿಸಲು ತಯಾರಿಲ್ಲ; ಮುಡಾ ಹಗರಣ ಸಂಬಂಧ ಸಿಬಿಐ ತನಿಖೆ ಆಗಬೇಕೆಂಬ ಚರ್ಚೆ ನಡೆದಿದೆ. ಇನ್ನೊಂದೆಡೆ ಇ.ಡಿ. ತನಿಖೆ ನಡೆಯುತ್ತಿದೆ. ಹಾಗಾಗಿ ಮುಖ್ಯಮಂತ್ರಿಗಳು ವಿಚಲಿತರಾದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಿಸಿದರು.

ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಲಾಠಿಪ್ರಹಾರ
ರಾಜ್ಯ ಸರಕಾರಕ್ಕೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ. ಸಮಸ್ಯೆಗಳಿಂದ ಓಡಿಹೋಗುವ ಪ್ರಯತ್ನ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪಂಚಮಸಾಲಿ ಸಮುದಾಯದ ಮೇಲೆ, ಹಿಂದೂಗಳ ಮೇಲೆ ಲಾಠಿಪ್ರಹಾರ ಆಗಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು.

ಈ ವಿಚಾರವಾಗಿ ಮುಖ್ಯಮಂತ್ರಿಗಳು, ಗೃಹ ಸಚಿವರು ಸದನದಲ್ಲಿ ಕನಿಷ್ಠ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಅಧಿಕಾರದ ಮದ ಇವರ ನೆತ್ತಿಗೇರಿದಂತೆ ಕಾಣುತ್ತಿದೆ ಎಂದು ಟೀಕಿಸಿದರು. ರಾಜ್ಯ ಸರಕಾರವು ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿದ್ದಂತೆ ಇದೆ. ಹಾಗಾಗಿ ಈ ರೀತಿ ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಗಳು ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ; ಇದು ಖಂಡಿತ ಸರಿಯಲ್ಲ ಎಂದರು.

ರಾಜಕೀಯಪ್ರೇರಿತ ತನಿಖೆ, ದಬ್ಬಾಳಿಕೆಗೆ ಹೆದರಿ ಓಡಿಹೋಗುವುದಿಲ್ಲ
ನಾಳೆ ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕಿದೆ. ಇವರ ರಾಜಕೀಯಪ್ರೇರಿತ ತನಿಖೆ, ದಬ್ಬಾಳಿಕೆಗಳಿಗೆ ಹೆದರಿ ಓಡಿಹೋಗುವ ಪ್ರಶ್ನೆ ಇಲ್ಲ. ಏನೇ ಬಂದರೂ ಅದನ್ನು ಧೈರ್ಯವಾಗಿ ಎದುರಿಸುತ್ತೇವೆ ಎಂದು ಸವಾಲು ಹಾಕಿದರು. ರಾಜ್ಯ ಸರಕಾರವು ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ದಾವಣಗೆರೆಯಲ್ಲಿ ವಿಜಯೇಂದ್ರ ಅವರ ಶಕ್ತಿ ಪ್ರದರ್ಶನ ಸಮಾರಂಭಕ್ಕೆ ಪೂರ್ವ ತಯಾರಿ ಎಂದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ಆದುದನ್ನು ಗಮನಿಸಿದ್ದೇನೆ. ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ. ನಾವೆಲ್ಲರೂ ಬಿಜೆಪಿಯ ಕಟ್ಟಾಳುಗಳು. ನಮ್ಮ ನಡವಳಿಕೆಯಿಂದ ಸಾಕಷ್ಟು ಗೊಂದಲ ಉಂಟಾಗಿದೆ. ಈ ರೀತಿ ಮತ್ತಷ್ಟು ಸಭೆ ಮಾಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಬಾರದು ಎಂದು ಮನವಿ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್