Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭೋವಿ ಗುರುಪೀಠಕ್ಕೆ ವಿಜಯೇಂದ್ರ ಭೇಟಿ: ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಶ್ರೀಗಳಿಗೆ ಆಮಂತ್ರಣ

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದ ಪ್ರಸಿದ್ಧ ಭೋವಿ ಗುರುಪೀಠಕ್ಕೆ ಭೇಟಿ ನೀಡಿ
, ಪರಮಪೂಜ್ಯ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದರು.

​ಮುಂಬರುವ ದಿನಗಳಲ್ಲಿ ಆಯೋಜಿಸಲಾಗಿರುವ ಹೆಮ್ಮೆಯ ಜನನಾಯಕ ' ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ' ಕಾರ್ಯಕ್ರಮಕ್ಕೆ ಶ್ರೀಗಳನ್ನು ಭೇಟಿ ಮಾಡಿ ಗೌರವಪೂರ್ವಕವಾಗಿ ಆಮಂತ್ರಣ ನೀಡಿದ ವಿಜಯೇಂದ್ರ ಅವರು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಶ್ರೀಗಳ ದಿವ್ಯ ಸಾನ್ನಿಧ್ಯವನ್ನು ಕೋರಿ ಪ್ರಾರ್ಥಿಸಿದರು.

​ಈ ಸಂದರ್ಭದಲ್ಲಿ ವಿಜಯೇಂದ್ರ ಅವರೊಂದಿಗೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದು, ಗುರುಪೀಠದಲ್ಲಿ ಶ್ರೀಗಳ ಆಶೀರ್ವಾದ ಪಡೆದರು.

​ಶಾಸಕರಾದ ಹರೀಶ್ ಪೂಂಜಾ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ,   ಸ್ಥಳೀಯ ಮುಖಂಡ ಲಿಂಗಮೂರ್ತಿ, ​ಮುಖಂಡ ಡಾ. ಸಿದ್ದಾರ್ಥ್ ತಿಪ್ಪಾರೆಡ್ಡಿ ಮತ್ತಿತರರು ಇದ್ದರು.

​ಈ ಭೇಟಿಯ ಸಮಯದಲ್ಲಿ ಪಕ್ಷದ ಸಂಘಟನೆ ಹಾಗೂ ಅಭಿಮಾನೋತ್ಸವದ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಬಿ.ಎಸ್. ಯಡಿಯೂರಪ್ಪನವರ ಮೇಲಿರುವ ಅಪಾರ ಗೌರವ ಮತ್ತು ಅಭಿಮಾನದ ಸಂಕೇತವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಶ್ರೀಗಳ ಮಾರ್ಗದರ್ಶನ ಮತ್ತು ಸಾನ್ನಿಧ್ಯವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ