LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರಕಾರವು ವಿಪಕ್ಷದ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಲಿ'-ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು : ಕಾಂಗ್ರೆಸ್ಸಿಗರು ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಹತ್ತಿರ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಇವತ್ತು ಇರುತ್ತದೆ; ನಾಳೆ ಹೋಗುತ್ತದೆ. ಅಧಿಕಾರ ಶಾಶ್ವತವಲ್ಲ. ವಿಪಕ್ಷದವರಿಗೆ ಅವರದೇ ಆದ ಗೌರವ ಇದೆ. ಆ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಆಡಳಿತ ಪಕ್ಷದವರ ಕರ್ತವ್ಯ ಎಂದು ಗಮನ ಸೆಳೆದರು. ಸರಕಾರ ಈಗಲಾದರೂ ಎಚ್ಚತ್ತುಕೊಳ್ಳಲಿ. ವಿಪಕ್ಷ ನಾಯಕರನ್ನು ಹೆದರಿಸುವುದು, ನಮ್ಮ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವುದನ್ನು ಕೈಬಿಡಿ ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ಹತ್ಯೆ ಬಳಿಕ ಶಾಂತಿ ಸಭೆ ನಡೆಸಿಲ್ಲ ಎಂಬ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಗೃಹ ಸಚಿವರು ಮಂಗಳೂರಿನಲ್ಲಿ ಪ್ರಮುಖರ ಸಭೆ ನಡೆಸಿದ್ದರು. ಅವರು ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡುವ ವಿಷಯ ತಿಳಿದು ಒಂದು ಕೋಮಿನ ಮುಖಂಡರು ಬಂದು ಗೃಹ ಸಚಿವರನ್ನು ಮುತ್ತಿಗೆ ಹಾಕಿದ್ದ ಮಾಹಿತಿ ಇದೆ. ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡದಂತೆ ಬೆದರಿಕೆ ಹಾಕಿದ್ದರು. ಸಚಿವರು ಹೆದರಿ ವಾಪಸ್ ಬಂದಿದ್ದಾರೆಂದರೆ ಯಾವ ಸೌಹಾರ್ದದ ಬಗ್ಗೆ ನೀವು ಚರ್ಚೆ ಮಾಡುತ್ತೀರಿ ಎಂದು ಕೇಳಿದರು.

ಸಿದ್ದರಾಮಯ್ಯನವರ ಈ ಸರಕಾರ ಅಲ್ಪಸಂಖ್ಯಾತರ ಓಲೈಕೆ ಮತ್ತು ಅವರನ್ನು ಖುಷಿ ಪಡಿಸಲು ಇದೆಯೇ ಹೊರತು ಕಾನೂನು- ಸುವ್ಯವಸ್ಥೆ ಚೆನ್ನಾಗಿರಬೇಕು; ರಾಜ್ಯದಲ್ಲಿ ಶಾಂತಿಯುತ ವಾತಾವರಣ ಇರಬೇಕೆಂಬ ಕಿಂಚಿತ್ತೂ ಕಾಳಜಿ ಅವರಿಗೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜ್ಯ ರಾಜಕಾರಣದ ಮಹತ್ತರ ತಿರುವು
ರಾಜ್ಯ ರಾಜಕಾರಣವು ಮುಂದಿನ ದಿನಗಳಲ್ಲಿ ಮಹತ್ತರ ತಿರುವು ಪಡೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಸ್ವತಃ ಸಿದ್ದರಾಮಯ್ಯನವರು ಬಿ.ಕೆ.ಹರಿಪ್ರಸಾದ್ ಅವರ ಮನೆಗೆ ಹೋಗಿದ್ದಾರೆ. ಮುಂದಿನ ದಿನಗಳ ಘಟನೆಗಳನ್ನು ಕಾದು ನೋಡಿ ಎಂದು ಹೇಳಿದರು.

ಕಮಲಹಾಸನ್ ಭಾಷಾ ವಿಷಬೀಜ ಬಿತ್ತಬಾರದು

ನಟ ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ. ಅವರಿಗೆ ತಮಿಳು ಭಾಷೆ ಬಗ್ಗೆ ಪ್ರೇಮ ಇದೆಯೆಂದು ಕನ್ನಡ ಭಾಷೆ ಬಗ್ಗೆ ಇಂಥ ಹೇಳಿಕೆ ಕೊಡುವುದು ಖಂಡಿತ ಸರಿಯಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಕನ್ನಡ ಮತ್ತು ತಮಿಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕಮಲಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರಿಗೆ ನೋವುಂಟಾಗಿದೆ. ಅನೇಕ ಪ್ರತಿಕ್ರಿಯೆಗಳ ಬಳಿಕ ಕೂಡ ಕ್ಷಮೆ ಕೇಳುವುದಿಲ್ಲ ಎಂದಿರುವುದು ದುರಹಂಕಾರದ ನಡೆ ಎಂದು ಖಂಡಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026