ಬೆಳಗಾವಿ :
ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ವಿಕಾಸ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಳಗಾವಿ ಉತ್ತರ ವಲಯಕ್ಕೆ ಐದು ಜಿಲ್ಲೆಗಳು ಬರುತ್ತವೆ. ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರ ನೇತೃತ್ವದಲ್ಲಿ ನಡೆಸುತ್ತಿರುವ ಫೋನ್ ಇನ್ ಕಾರ್ಯಕ್ರಮ ನನ್ನ ಗಮನಕ್ಕೆ ಬಂದಿದ್ದು ಇದೇ ಮಾದರಿಯಲ್ಲಿ ಉಳಿದ ನಾಲ್ಕು ಜಿಲ್ಲೆಗಳಲ್ಲಿ ಫೋನ್ ಇನ್ ಕಾರ್ಯಕ್ರಮ ಮಾಡಲು ಎಸ್ಪಿ ಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು. ಬೆಳಗಾವಿ ಜಿಲ್ಲೆ ನನಗೆ ಹೊಸದಲ್ಲ. ಈ ಹಿಂದೆ 2005 ರಲ್ಲಿ ನಾನು ಪ್ರಬೇಶನರಿ ಆಗಿ ಎಂಟು ತಿಂಗಳ ಕಾಲ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.