
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಅವರು ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಚರ್ ಹೆಗಳು ನಡೆಯುತ್ತಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.
ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ವಿಕ್ರಂ ಅವರಿಗೆ ಶರಣಾಗುವಂತೆ ಮನವಿಯನ್ನು ಸಹ ಮಾಡಿಕೊಳ್ಳಾಗುತ್ತು. ಇದ್ಯಾವುದಕ್ಕೂ ಕಿವಿ ಗೋಡದ ವಿಕ್ರಂ ಅವರನ್ನು ಎನ್ಕೌಂಟರ್ ನಲ್ಲಿ ಹತರನ್ನಾಗಿ ಮಾಡಿದ್ದಾರೆ ಎಂದರು. ಈ ಮೂಲಕ ನಕ್ಸಲ್ ಚಟುವಟಿಕೆ ನಿಗ್ರಹಿಸಲು ಹೊಸ ಯೋಜನೆ ರೂಪಿಸಲಾಗಿದೆ. ಯಾರು ಇನ್ನು ಮುಂದೆ ನಕ್ಸಲ್ ಕೃತ್ಯದಲ್ಲಿ ಭಾಗಿಯಾಗಬಾರದು ಎಂದು ಈ ಮೂಲಕ ಜನರಿಗೆ ಕರೆ ನೀಡಿದ್ದಾರೆ.