LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ICAR,IIHR ನಿಂದ ವಿಕ್ಷಿತ್ ಕೃಷಿ ಸಂಕಲ್ಪ ಅಭಿಯಾನ

ಬೆಂಗಳೂರು: ತಮಗೆ ತಿಳಿದಿರುವಂತೆ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು (ICAR), ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ, ಮೇ 29 ರಿಂದ ಜೂನ್ 12, 2025 ರವರೆಗೆ 'ವಿಕ್ಷಿತ್ ಕೃಷಿ ಸಂಕಲ್ಪ ಅಭಿಯಾನ' ಎಂಬ ರಾಷ್ಟ್ರವ್ಯಾಪಿ ಬೃಹತ್ ಮುಂಗಾರು ಪೂರ್ವ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ICAR ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಸರಘಟ್ಟದ ಕ್ಯಾಂಪಸ್ ನಲ್ಲಿ ಗಿಡಗಳನ್ನು ಪರಿಸರ ದಿನಾಚರಣೆಯನ್ನು ಆಚರಣೆ ಮಾಡಿದರು, ನಂತರ ಮಾತನಾಡಿದವರು, ಐಸಿಎಆರ್ ಸಂಸ್ಥೆಗಳು, ಕೃಷಿವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಕೃಷಿಗೆ ಸಂಬಂಧಿಸಿದ ರಾಜ್ಯ ಸರ್ಕಾರಿ ಇಲಾಖೆಗಳನ್ನು ಒಳಗೊಂಡ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸುಧಾರಿತ ತಂತ್ರಜ್ಞಾನಗಳು ಮತ್ತು ಹೊಸದಾಗಿ ಬಿಡುಗಡೆಯಾದ ಮುಂಗಾರು ಬೆಳೆಗಳ ಪ್ರಭೇದಗಳು, ಸರ್ಕಾರಿ ಯೋಜನೆಗಳು, ರೈತರ ಪ್ರತಿಕ್ರಿಯೆ ಮತ್ತು ತಳಮಟ್ಟದ ನಾವೀನ್ಯತೆಗಳ ಕುರಿತು ಜಾಗೃತಿ ಮೂಡಿಸಲು 2000 ಕ್ಕೂ ಹೆಚ್ಚು ಬಹು-ಸಾಂಸ್ಥಿಕ ಮತ್ತು ಬಹು-ಶಿಸ್ತಿನ ತಂಡಗಳು ಪ್ರತಿದಿನ 700 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಭೇಟಿ ನೀಡುತ್ತಿವೆ.

ಕರ್ನಾಟಕದಲ್ಲೂ ಎಪ್ಪತ್ತಕ್ಕೂ ಹೆಚ್ಚು ಅಂತರಶಿಸ್ತೀಯ ವಿಜ್ಞಾನಿಗಳು, ಕೃಷಿ ಮತ್ತು ಸಂಬಂಧಿತ ಇಲಾಖೆ ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡುತ್ತಿದ್ದಾರೆ, ಪ್ರತಿದಿನ ರೈತರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಮತ್ತು ರಾಷ್ಟ್ರೀಯ ಆರ್ಥಿಕತೆಗೆ ಗಣನೀಯವಾಗಿ ಕೊಡುಗೆ ನೀಡುವ ಕೃಷಿ ವಲಯವನ್ನು ಅಭಿವೃದ್ಧಿಪಡಿಸಲು ಬೇಡಿಕೆ ಆಧಾರಿತ ಮತ್ತು ಸಮಸ್ಯೆ ಆಧಾರಿತ ಸಂಶೋಧನಾ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ರೈತರಿಂದ ಪ್ರತಿಕ್ರಿಯೆಯನ್ನು ದಾಖಲಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಜೂನ್ 08  ಬೆಂಗಳೂರಿನ ಹೆಸರಘಟ್ಟದಲ್ಲಿರುವ ಐಸಿಎಆರ್-ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ನಡೆಯುತ್ತದೆ ಎಂದು ತಿಳಿದಿದ್ದರು.

ಇನ್ನು ಕಾರ್ಯಕ್ರಮದಲ್ಲಿ ಕರ್ನಾಟಕದ ರೈತರಿಗೆ ಹಾಗೂ ಪ್ರಯೋಜನಗಳ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ತಿಳಿಸಿಕೊಡಲಿದ್ದಾರೆ. ಆಧುನಿಕ ಕೃಷಿ ಪದ್ಧತಿ ಹಾಗೂ ಸಾವಯವ ಕೃಷಿ ಬಗ್ಗೆ ವಿಶೇಷ ಗಮನ ಹಾಗೂ ಹೊತ್ತು ನೀಡಲಿದ್ದಾರೆ ಎಂದು ತಿಳಿಸಿದರು. ಹೀಗಾಗಿ ಇಂತಹ ಕಾರ್ಯಕ್ರಮಗಳಿಗೆ ರೈತರು ಆಗಮಿಸಿದರೆ ಸಾಕಷ್ಟು ಪ್ರಯೋಜನಗಳು ಹಾಗೂ ತಿಳುವಳಿಕೆಗಳು ಆಗುತ್ತದೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ