ಮಹಿಳಾ ನೌಕರರ ಮೇಲಿನ ದೌರ್ಜನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ : ನ್ಯಾ.ಎಂ.ವಿಜಯ್.!
ಚಿತ್ರದುರ್ಗ: ಕೆಲಸದ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಮೂಲಭೂತ ಹಾಗೂ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಮಹಿಳಾ ನೌಕರರ ಘನತೆ ಕಾಪಾಡುವುದು ಎಲ್ಲ ಪುರಷ ನೌಕರರ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ, ಅಂತರಾಷ್ಟಿçÃಯ ಮಹಿಳಾ ದೌರ್ಜನ್ಯ ವಿರೋದಿ ದಿನದ ಅಂಗವಾಗಿ, ನಗರದ ಬಾಲ ಭವನದಲ್ಲಿ ಶುಕ್ರವಾರ ಆಯೋಜಿಸಲಾದ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ (ನಿರೋಧ, ನಿರ್ಬಂಧ ಹಾಗೂ ನಿವಾರಣೆ) ಕಾಯ್ದೆ-2013ರ ಕುರಿತ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಚೇರಿಗಳಲ್ಲಿ ಮಹಿಳೆಯರು ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಮುಕ್ತ ವಾತಾವರಣವನ್ನು ಕಲ್ಪಿಸಬೇಕು. ಲಿಂಗಾಧಾರಿತ ಶೋಷಣೆ ತಡೆದು, ಸಮಾನತೆ, ಜೀವಿಸುವ ಹಕ್ಕು ಹಾಗೂ ವೈಯಕ್ತಿಕ ಸ್ವಾತಂತ್ರವನ್ನು ಮಹಿಳೆಯರಿಗೆ ನೀಡಬೇಕು. ಸ್ವಾತಂತ್ರ ನಂತರ ದೇಶದಲ್ಲಿ ಮಹಿಳೆಯರ ರಕ್ಷಣೆಗೆ ಸಾಕಷ್ಟು ಕಾಯ್ದೆಗಳು ಜಾರಿಯಾದರೂ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ಪ್ರತ್ಯೇಕ ಕಾನೂನು ಇರಲಿಲ್ಲ. 1997 ರಲ್ಲಿ ಬನ್ವಾರಿ ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಕೆಲಸ ಸ್ಥಳದಲ್ಲಿ ಮಹಿಳೆಯರ ರಕ್ಷಣೆಗಾಗಿ ವಿಶಾಕ ಮಾರ್ಗಸೂಚಿಗಳನ್ನು ರೂಪಿಸಿತು.
ಇದನ್ನು ಆಧರಿಸಿ 2013 ರಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ (ನಿರೋಧ, ನಿರ್ಬಂಧ ಹಾಗೂ ನಿವಾರಣೆ) ಕಾಯ್ದೆ ಜಾರಿ ಮಾಡಲಾಗಿದೆ. ಇದಕ್ಕೂ ಮೊದಲು 1979 ರಲ್ಲಿ ವಿಶ್ವ ಸಂಸ್ಥೆ ಕಾರ್ಯಸ್ಥಳಗಳಲ್ಲಿ ಮಹಿಳೆಯರ ವಿರುದ್ದದ ಎಲ್ಲ ತಾರತಮ್ಯ ಹಾಗೂ ದೌರ್ಜನ್ಯಗಳನ್ನು ತಡೆಯಲು ಸಮಾವೇಶ ನಡೆಸಿ ಅಂತರಾಷ್ಟಿçÃಯ ಒಪ್ಪಂದವನ್ನು ಜಾರಿ ಮಾಡಿತು. 1993 ರಲ್ಲಿ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿತು. ಆದಾಗ್ಯೂ ಪ್ರತ್ಯೇಕ ಕಾನೂನು ರಚಿಸಲು ಸುಮಾರು 20 ವರ್ಷಗಳ ಸುದೀರ್ಘ ಕಾಲ ಹಿಡಿದಿದ್ದು, ದೇಶದ ರಾಜಕೀಯ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ನ್ಯಾ.ಎಂ.ವಿಜಯ್ ವಿಷಾದ ವ್ಯಕ್ತ ಪಡಿಸಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಆಂತರಿಕ ಸಮಿತಿ ಅಧ್ಯಕ್ಷೆ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದ್ಯಸೆ ಡಿ.ಕೆ.ಶೀಲಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ ವಿಜಯ್‌ಕುಮಾರ್ ಸೇರಿದಂತೆ, ಹಲವು ಇಲಾಖೆಗಳ ಆಂತರಿಕ ಸಮಿತಿ ಮುಖ್ಯಸ್ಥರು ಭಾಗವಹಿಸಿದ್ದರು. ಹಿರಿಯ ಸಹಾಯಕ ನಿರ್ದೇಶಕಿ ಪವಿತ್ರಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ (ನಿರೋಧ, ನಿರ್ಬಂಧ ಹಾಗೂ ನಿವಾರಣೆ) ಕಾಯ್ದೆ-2013ರ ಕುರಿತು ಸುದೀರ್ಘ ಉಪನ್ಯಾಸ ನೀಡಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.