LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇರಾನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದೀಗ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ.

ರಾಜಧಾನಿ ಟೆಹ್ರಾನ್ ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದುಬಂದಿದೆ. ಅಲ್ಲದೇ ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ ಸಮೂಹದ ಮೇಲೆ ಏಕಾಏಕಿ ಗುಂಡು ಹಾರಿಸಿದ್ದು, 30 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಖಮೇನಿ ಸರ್ಕಾರದ ವಿರುದ್ಧ 2025ರ ಡಿ.28 ರಂದು ಪ್ರಾರಂಭವಾದ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ದೇಶಾದ್ಯಂತ ಇಂಟರ್‌ನೆಟ್ ಮತ್ತು ಫೋನ್ ಸಂಪರ್ಕಗಳನ್ನ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಇರಾನ್‌ನಿಂದ ಗಡಿಪಾರು ಆಗಿರುವ ಯುವರಾಜ ರೇಜಾ ಪಹ್ಲವಿ ಅವರು ಸಾಮೂಹಿಕ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಟೆಹರಾನ್ ಮತ್ತು ಇತರ ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಖಮೇನಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಖಮೇನಿ ವಿರುದ್ಧ ಎಂದು ಜನರು ಘೋಷಣೆ ಕೂಗಿ ಟೆಹರಾನ್‌ನಲ್ಲಿರುವ ಸರ್ಕಾರಿ ಕಚೇರಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026