LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಯಕವೇ ಕೈಲಾಸ ಎಂದರು ವಿಶ್ವಗುರು ಬಸವಣ್ಣ

ಕಾಯಕವೇ ಕೈಲಾಸ ಎಂದು ಮಾನವ ಕುಲಕ್ಕೆ ಸಂದೇಶವನ್ನು ನೀಡಿದ ಬಸವಣ್ಣನವರ ಹುಟ್ಟಿದ ದಿನ ಇಂದು. ಸಮಾಜಕ್ಕೆ ತನ್ನದೇ ಆದ ತತ್ವಗಳ ಮೂಲಕ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿದ ಮಹಾ ಸಂತನ ಜನ್ಮದಿನವಾದ ಇಂದು (ಮೇ 10) ಅದ್ದೂರಿಯಾಗಿ ಬಸವ ಜಯಂತಿಯನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಕವಿ-ತತ್ವಜ್ಞಾನಿಯಾಗಿ ಸಮಾಜದ ಉದ್ದಾರಕ್ಕೆ ಜನ್ಮತೆತ್ತ ಈ ಬಸವಣ್ಣ ಸಮಾಜಕ್ಕೆ ನೀಡಿದ ಕೊಡುಗೆಗಳೇನು ಎನ್ನುವ ಮಾಹಿತಿಯು ಇಲ್ಲಿದೆ.


ಬಸವಣ್ಣಅವರು ಶೈವ ಧರ್ಮದ ಭಕ್ತಿ ಚಳವಳಿಯಲ್ಲಿ ಪ್ರಸಿದ್ಧ ಸಂತರಾಗಿ ಗುರುತಿಸಿಕೊಂಡಿದ್ದವರು. ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಮೇಲು ಕೀಳು, ಜಾತಿ ಧರ್ಮ ಹೀಗೆ ನೊಂದವರ ಪರವಾಗಿ ನಿಂತ ಮಹಾನುಭಾವ. ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣನವರು ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ. ‘ಕಾಯಕವೇ ಕೈಲಾಸ’, ‘ವಸುದೈವ ಕುಟುಂಬಕಂ’ ಹೀಗೆ ಹಲವಾರು ತತ್ವಗಳನ್ನು ಸಾರಿದ ಮಹಾನ್ ಭಾವನನ್ನು ಇಂದು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಸವ ಜಯಂತಿಯನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಆಚರಿಸಲಾಗುತ್ತದೆ. ಸಮಾಜಕ್ಕೆ ಸಂದೇಶವನ್ನು ಸಾರಿದ ಬಸವೇಶ್ವರರ ಜನ್ಮ ವಾರ್ಷಿಕೋತ್ಸವವಾಗಿದೆ.

ಸಾರ್ವಜನಿಕ ಬಸವ ಜಯಂತಿ ಆಚರಣೆ ಶುರುವಾದದ್ದು ಯಾವಾಗ?


ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯನ್ನು ಆಚರಿಸಲು ಮುಂದಾದರು. ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕದ ಬಗ್ಗೆ ಗೊಂದಲ ಏರ್ಪಟ್ಟಿತ್ತು. ಆ ಸಮಯದಲ್ಲಿ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ಸೂಚಿಸಿದರು. ಅಂದಿನಿಂದ ಪ್ರತಿ ವರ್ಷ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.

ಬಸವ ಜಯಂತಿ ಆಚರಣೆ ಹೇಗೆ?ಕರ್ನಾಟಕದಲ್ಲಿ ಬಸವ ಜಯಂತಿಯಂದು ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಅದಲ್ಲದೇ, ನಾವಿಂದು ಮಹಾಸಂತ ಬಸವಣ್ಣನವರ ತತ್ವಗಳನ್ನು ಸ್ಮರಿಸುವ ದಿನವಾಗಿದೆ. ಹೀಗಾಗಿ ವಿವಿದೆಡೆಗಳಲ್ಲಿ ಲಿಂಗಾಯತ ಸಮಿತಿಗಳು ವಿವಿಧ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ


 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು