E-PAPER
13 Nov 2026, 08:21:33 PM|
Gold₹13793/gGold24K ₹13,793/g - 22K ₹12,633/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲೆ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.

ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರಿನಲ್ಲಿ ದೇಶದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳನ್ನೂ ಉದ್ಘಾಟಿಸಲಿದ್ದಾರೆ.

ಇದರೊಂದಿಗೆ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದು, ಮೈಸೂರಿನಲ್ಲಿ ಭಾರತದ ಮೊದಲ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಅನ್ನು ಉದ್ಘಾಟಿಸಲಿದ್ದಾರೆ.

ಈ ವೇಳೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ,, ಕೇಂದ್ರ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಕಾರ್ಮಿಕ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ.ಸಲೀಂ ಸೇರಿದಂತೆ ಸಂಸದರು, ಶಾಸಕಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ 15,600 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಪ್ರಧಾನಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆಮಂಗಳೂರು–ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ವಿಶ್ವದ ಮೊದಲ ‘COSMOS-Mysuru’ ತಾರಾಲಯ ಲೋಕಾರ್ಪಣೆಗೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿಮೈಸೂರಿನಲ್ಲಿ ‘ಭಾರತ ವನ’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆಪ್ರಧಾನಿ ಭೇಟಿಗೆ ಸರ್ವಪಕ್ಷ ನಿಯೋಗಕ್ಕೆ ಅವಕಾಶ ನೀಡುತ್ತಿಲ್ಲ : ಈಶ್ವರ್‌ ಖಂಡ್ರೆ ಅಸಮಾಧಾನತುಂಗಭದ್ರಾ ಕಾಲುವೆಗಳಿಗೆ ನ.20 ರವರೆಗೆ ನೀರು ಹರಿಸುತ್ತೇವೆ : ಶಿವರಾಜ ತಂಗಡಗಿಮೆಟ್ರೋ ಯೋಜನೆಗಳ ಆರ್ಥಿಕ ಹೊರೆ ಕೇಂದ್ರ-ರಾಜ್ಯಗಳು ಸಮಾನವಾಗಿ ಹಂಚಿಕೊಳ್ಳಲಿ: ಸಿಎಂ ಡಿ.ಕೆ.ಶಿವಕುಮಾರ್ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ