E-PAPER
17 Nov 2026, 05:26:00 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ

ಬೆಂಗಳೂರು-30: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.

ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ:
• ಮಹಿಳಾ ಆಯವ್ಯಯದಡಿ 08 ಮಹಿಳೆಯರು,
• ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು
• ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು 2025 ರ ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ