Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ ಜಿಲ್ಲೆ ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್‌ವಿತರಣೆ



ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
     ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
     ಮಹಾತ್ಮ ಗಾಂಧೀಜಿಯವರ ಕನಸಿನಂತೆ ಭಾರತ ಗ್ರಾಮಗಳ ದೇಶವಾಗಿದೆ. ದೇಶದ ಬಹುಪಾಲು ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಗ್ರಾಮಗಳ ಅಭಿವೃದ್ಧಿಯಾದಾಗ ಮಾತ್ರ ನೈಜ ಭಾರತದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
         ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರು, ರೈತರ ಸಮಸ್ಯೆಗಳು, ರಸ್ತೆ, ಬಸ್ ಸಾರಿಗೆ, ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ, ನೀರಾವರಿ, ವಿದ್ಯುತ್ ಸೇರಿದಂತೆ ನೂರಾರು ಸಮಸ್ಯೆಗಳನ್ನು ಗ್ರಾಮೀಣ ಪತ್ರಕರ್ತರು ತಮ್ಮ ವರದಿಗಳ ಮೂಲಕ ಸರ್ಕಾರ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರುತ್ತಿದ್ದಾರೆ. ಇದರಿಂದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
      ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಪ್ರಸ್ತಾವನೆಯನ್ನು ಅನುಷ್ಠಾನಕ್ಕೆ ಶ್ರಮಿಸಿದ್ದಾರೆ.ವಿವಿಧ ನಿಯಮಾವಳಿಗಳ ಕಾರಣದಿಂದ ಅದು ವಿಳಂಬವಾಗಿತ್ತು. ಇದೀಗ ಅದನ್ನು ಸರಳೀಕರಿಸಿ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸಿಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
     ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಡಿಜಿಟಲ್ ಮಾಧ್ಯಮ ಹಾಗೂ ವಿವಿಧ ತಂತ್ರಜ್ಞಾನಗಳ ಬೆಳವಣಿಗೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಮೊಬೈಲ್, ವಾಟ್ಸ್???ಪ್ ಹಾಗೂ ಇ-ಮೇಲ್ ಮೂಲಕ ಮಾಹಿತಿ ವಿನಿಮಯ ಅತ್ಯಂತ ವೇಗವಾಗಿ ನಡೆಯುತ್ತಿದೆ. ಪ್ರಿಂಟ್ ಮಾಧ್ಯಮದ ಜೊತೆಗೆ ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮಗಳ ವ್ಯಾಪ್ತಿಯೂ ಹೆಚ್ಚಾಗಿದೆ ಎಂದರು.
ವಿದೇಶಗಳಲ್ಲಿ ಡಿಜಿಟಲ್ ಮಾಧ್ಯಮದ ಬಳಕೆ ಹೆಚ್ಚಾಗಿದ್ದರೂ, ಭಾರತದಲ್ಲಿ ಪತ್ರಿಕೆಗಳನ್ನು ಕೈಯಲ್ಲಿ ಹಿಡಿದು ಓದುವ ಸಂಸ್ಕೃತಿ ಇನ್ನೂ ಜೀವಂತವಾಗಿದೆ. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಪತ್ರಿಕೋದ್ಯಮದ ಮೂಲ ಉದ್ದೇಶವಾದ ಜನರ ಸಮಸ್ಯೆಗಳನ್ನು ಸಮಾಜದ ಮುಂದಿಡುವ ಕಾರ್ಯ ಮುಂದುವರಿಯಬೇಕು ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಟ್ಟು ೪೦ ಜನರಿಗೆ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸೌಲಭ್ಯ ದೊರಕಿದೆ.ಇನ್ನುಳಿದವರ ಅರ್ಜಿಗಳು ಕೆಲವು ತಾಂತ್ರಿಕ ಸಮಸ್ಯೆಗಳಿಂದ ತಿರಸ್ಕೃತಗೊಂಡಿದ್ದು ಸಚಿವರ ಸೂಚನೆಯಂತೆ ಅರ್ಹರಿಗೆ ಪಾಸ್ ದೊರಕಿಸಿಕೊಡಲು ಇಲಾಖೆ ಶ್ರಮಿಸಲಿದೆ.ರಾಜ್ಯದಲ್ಲಿಯೇ ಅತೀ ಹೆಚ್ಚು ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆದುಕೊಂಡಿರುವ ಜಿಲ್ಲೆ ನಮ್ಮದಾಗಿದೆ ಎಂದರು.ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆನಂದ ಪ್ರಕಾಶ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹೇಶ ಪೋತದಾರ,ರಾಜಶೇಖರ ದೈವಾಡಿ,ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ,ಉಪಾಧ್ಯಕ್ಷ ಶಶಿಕಾಂತ ಮೆಂಡೇಗಾರ,ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ ಇದ್ದರು.
೪೦ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಈ ಹಿಂದೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಸಂದರ್ಭದಲ್ಲಿ ೧೧ ತಿಂಗಳ ಬ್ಯಾಂಕ್ ಅಕೌಂಟ್ಸ್ ಹಾಗೂ ನಿಯಮಾವಳಿಗಳ ಮಾನದಂಡದಿಂದಾಗಿ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ನಿಯಮವನ್ನು ಸರಳೀಕರಿಸಲಾಗಿದೆ.ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಸುಮಾರು ೪೦೦ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದ್ದು, ವಿಜಯಪುರ ಜಿಲ್ಲೆಯ ೪೦ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಸಚಿವ ಪಾಟೀಲ ತಿಳಿಸಿದರು.
ಸರ್ಕಾರಕ್ಕೆ,ಸಚಿವರಿಗೆ ಅಭಿನಂದನೆ : ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕಾರ್ಯ ಮಾಡಿರುವ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾಧ್ಯಕ್ಷ ವಿನಾಯಕ ಸೊಂಡೂರ,ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಶಂಕರ ಹೆಬ್ಬಾಳ, ಪತ್ರಕರ್ತರಾದ ಅಂಬಾಜಿ ಘೋರ್ಪಡೆ, ಹಣಮಂತ ನಲವಡೆ ತಿಳಿಸಿದರು. 
   ಕಾನಿಪ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ,ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಹೋರಾಟಕ್ಕೆ ಸ್ಪಂದಿಸಿ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್ ನೀಡಿದೆ.ಇದಕ್ಕೆ ಕಾರಣೀಕರ್ತರಾದ ಹಿಂದಿನ ಸಿಎಂ ಸಿದ್ಧರಾಮಯ್ಯ,ಈಗಿನ ಸಿಎಂ ಡಿ.ಕೆ.ಶಿವಕುಮಾರ,ಹಿಂದಿನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ