LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೂರ್ವ ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತ

ಬಾಲಿ : ಪೂರ್ವ ಇಂಡೋನೇಷ್ಯಾದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಂಡಿವೆ.

ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನಲೆ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಾಸ್ಸಾಗಿದೆ. ಈ ಸ್ಫೋಟದಿಂದಾಗಿ, ಏರ್ ಇಂಡಿಯಾ, ಸಿಂಗಾಪುರ್ ಏರ್ಲೈನ್ಸ್, ಏರ್ ನ್ಯೂಜಿಲೆಂಡ್, ಜೆಟ್‌ಸ್ಟಾರ್, ವರ್ಜಿನ್ ಆಸ್ಟ್ರೇಲಿಯಾ ಮತ್ತು ಚೀನಾದ ಜುನ್ಯಾವೊ ಏರ್‌ಲೈನ್ಸ್ ಸೇರಿದಂತೆ ಬಾಲಿಗೆ ತೆರಳುವ ಅನೇಕ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಜ್ವಾಲಾಮುಖಿಯಿಂದ ಉಂಟಾಗಿರುವ ದಟ್ಟ ಹೊಗೆಯು 10 ಕಿ.ಮೀ ಎತ್ತರವನ್ನು ತಲುಪಿದೆ. ಹೀಗಾಗಿ ಇದು ವಾಯು ಸಂಚಾರದ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಇಂದು ಬೆಳಗ್ಗೆ ಏರ್ ಇಂಡಿಯಾ ವಿಮಾನವು ದೆಹಲಿಯಿಂದ ಬಾಲಿಗೆ ಹೊರಟಿತ್ತು. ಆದರೆ ಜ್ವಾಲಾಮುಖಿಯಿಂದಾಗಿ ದೆಹಲಿಗೆ ವಾಪಸ್ ಹೋಗುವಂತೆ ಸೂಚಿಸಲಾಯಿತು.

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಏರ್ ಇಂಡಿಯಾ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ತೊಂದರೆಗೊಳಗಾದ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸಲು ಎಲ್ಲಾ ಪ್ರಯತ್ನಿಸಲಾಗುತ್ತಿದೆ. ಏರ್ ಇಂಡಿಯಾ ಪ್ರಯಾಣಿಕರಿಗೆ ಹೋಟೆಲ್ ವಸತಿ ಸೌಲಭ್ಯವನ್ನು ಒದಗಿಸಿದ್ದು, ಪ್ರಯಾಣಿಕರಿಗೆ ಎರಡು ಆಯ್ಕೆಗಳನ್ನು ನೀಡಿದೆ. ಒಂದೊಮ್ಮೆ ಪ್ರಯಾಣಿಕರ ಟಿಕೆಟ್‌ನ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಅಥವಾ ಸ್ವಲ್ಪ ಸಮಯದ ಬಳಿಕ ಬೇರೆ ವಿಮಾನದ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026