LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತದಾರರ ಪಟ್ಟಿ ಮ್ಯಾಪಿಂಗ್: ಮಾರ್ಚ್ 20ರ ಗಡುವು

ಚಿತ್ರದುರ್ಗ: ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪ್ರಗತಿಯಲ್ಲಿದೆ. 2025ರ ಸೆಪ್ಟೆಂಬರ್ ಮಾಹೆಯಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.50 ರಿಂದ 80ರಷ್ಟು ಪೂರ್ಣಗೊಳಿಸಿದ್ದು, ಇನ್ನೂ ಬಾಕಿ ಇರುವ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು.

ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026