Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಆರ್.ವಿ ಇಂಜಿನಿಯರಿಂಗ್ ಕಾಲೇಜು ಹಾಗೂ ಪಿ.ಇ.ಎಸ್ ವಿಶ್ವವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ:

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.28: ನಗರದಲ್ಲಿ ವಿದ್ಯಾರ್ಥಿಗಳೆಲ್ಲರೂ ಚುನಾವಣಾ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸಿ, ತಮ್ಮ ಪೋಷಕರು, ಸ್ನೇಹಿತರು ಮತ್ತು ನೆರೆಹೊರೆಯಿಂದ ತಪ್ಪದೆ ಮತದಾನ ಮಾಡುವಂತೆ ನೋಡಿಕೊಳ್ಳುವುದರ ಜೊತೆಗೆ ಸ್ವತಃ ಮತಗಟ್ಟೆಗೆ ತೆರಳಿ ಮತದಾನ ಮಾಡಲು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಕೋರಿದರು.



ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆರ್.ಆರ್.ನಗರ ವಲಯ ವ್ಯಾಪ್ತಿಗೆ ಬರುವ ಆರ್.ವಿ ಇಂಜಿನಿಯರಿಂಗ್ ಕಾಲೇಜು ಹಾಗೂ ಪಿ.ಇ.ಎಸ್ ವಿಶ್ವವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮತದಾನ ಮಾಡುತ್ತಿರುವ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ನಗರದಲ್ಲಿ ಒಟ್ಟಾರೆ 97.15 ಲಕ್ಷ ಮಂದಿ ಮತದಾರಲ್ಲಿ, ಅದರಲ್ಲಿ 1.43 ಲಕ್ಷ ಯುವ ಮತದಾರರಿದ್ದಾರೆ. ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಯುವ ಮತದಾರರಿದ್ದು, ಎಲ್ಲರೂ ಮತ ಚಲಾಯಿಸಿ ಬೇರೆಯವರು ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.

ಮತದಾನದ ದಿನವಾದ ಮೇ. 10 ರಂದು ಮತಗಟ್ಟೆಗಳ ಬಳಿ ಕಾಯಬಾರದೆಂಬ ಉದ್ದೇಶದಿಂದ ಈ ಬಾರಿ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸೇರಿ ಮತಗಟ್ಟೆಗಳ ಸಂಖ್ಯೆಯನ್ನು 8082ಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಮತಗಟ್ಟೆಗಳ ಬಳಿಯೂ ಕನಿಷ್ಠ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಸಂಬಂಧಿತ ಪ್ರಶ್ನೆ ಅಥವಾ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಮತದಾನದ ದಿನವನ್ನು ಸಾರ್ವತ್ರಿಕಾ ರಜಾದಿನವನ್ನಾಗಿ ಘೋಷಿಸಲಾಗುತ್ತದೆ. ನೀವು ಮತ ಚಲಾಯಿಸುವ ಮತಗಟ್ಟೆಯ ಬಗ್ಗೆ ಮಾಹಿತಿಗಾಗಿ voterportal.eci.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಮತದಾನ ಮಾಡುವ ದಿನ ಶೇಖಡಾವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇದೇ ಭಾನುವಾರ(ಏ. 30) ನಗರದಾದ್ಯಂತ ಅಧಿಕಾರಿ/ಸಿಬ್ಬಂದಿಗಳೊಡನೆ ಏಕಕಾಲದಲ್ಲಿ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಎಲ್ಲಾ ಯುವ ಮತದಾರರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ಪ್ರಸ್ತುತ ಚುನಾವಣೆಯ ಮತದಾನದ ದಿನಾಂಕ ಮತ್ತು ಸಮಯ, ಬಿಎಲ್‌ಒ ಅಧಿಕಾರಿಗಳ ಸಂಪರ್ಕ ಪ್ರಮುಖ ವೆಬ್‌ಸೈಟ್, ಸಹಾಯವಾಣಿ ಸಂಖ್ಯೆಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಮತದಾರರ ಮಾರ್ಗದರ್ಶಿಯನ್ನು ಕನ್ನಡ/ಇಂಗ್ಲೀಷ್ ಕರಪತ್ರವನ್ನು ಮತದಾನದ ಮುಂಚಿತವಾಗಿ ಪ್ರತಿ ಮನೆಗೆ ವಿತರಿಸಲಾಗುತ್ತದೆ. ಮತಗಟ್ಟೆಯಲ್ಲಿ ಮತದಾರರು ಮಾಡಬೇಕಾದ ಮತ್ತು ಮಾಡಬಾರದಂತಹ ಇತರೆ ಪ್ರಮುಖ ಮಾಹಿತಿಯನ್ನು ಅಗತ್ಯವಿರುವ ದಾಖಲೆಗಳನ್ನು ಒಳಗೊಂಡಿರುವ ಮತದಾರರ ಮಾರ್ಗದರ್ಶಿ ಕರಪತ್ರವನ್ನು ಬಿಎಲ್‌ಒಗಳ ಮೂಲಕ ಮತದಾರರ ಚೀಟಿ ಜತೆಗೆ ವಿತರಿಸಲಾಗುತ್ತದೆ ಎಂದು ಹೇಳಿದರು.

ಈ ವೇಳೆ ವಲಯ ಆಯುಕ್ತರಾದ ಶ್ರೀ ರೆಡ್ಡಿ ಶಂಕರ ಬಾಬು, ವಲಯ ಜಂಟಿ ಆಯುಕ್ತರಾದ ನಾಗರಾಜ್, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ಕಂದಾಯ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಮಾಧ್ಯಮ ಮಾಹಿತಿ:*

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ