LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದನ್ನು ಬೆಂಬಲಿಸಿ ಪಾದಯಾತ್ರೆ

ಬೆಂಗಳೂರು: ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು 2019ರಲ್ಲಿ ಗುತ್ತಿಗೆ, ಅರೆಗುತ್ತಿಗೆ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಮಾರು 19 ಸಾವಿರಕ್ಕೂ ಹೆಚ್ಚು ಉಪನ್ಯಾಸಕರ ಉದ್ಯೋಗವನ್ನು ಖಾಯಂ ಮಾಡುವ ಮೂಲಕ ಸೇವಾ ಭದ್ರತೆ ಕಲ್ಪಿಸಿದ್ದಾರೆ. ದೆಹಲಿಯಲ್ಲಿ ಸಾಧ್ಯವಾಗಿರುವಂತದ್ದು ಕರ್ನಾಟಕದಲ್ಲಿ ಏಕೆ ಸಾಧ್ಯವಿಲ್ಲ? 11 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಆರ್ಥಿಕ ಶಕ್ತಿ ರಾಜ್ಯ ಸರ್ಕಾರಕ್ಕಿಲ್ಲವೇ? ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಕಿಡಿಕಾರಿದ್ದಾರೆ.

ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯ ಅತಿಥಿ ಉಪನ್ಯಾಸಕರ ಸಂಘವು ಬುಧವಾರ ನೆಲಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ನಡೆಸಿದ ಪಾದಯಾತ್ರೆ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

ಹರಿಯಾಣದಲ್ಲೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಲಾಗಿದೆ. ಪಂಜಾಬ್‌ನಲ್ಲಿಯೂ ಈ ನಿಟ್ಟಿನಲ್ಲಿ ಪ್ರಮುಖ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಭ್ರಷ್ಟಾಚಾರವನ್ನು ನಿಯಂತ್ರಿಸಿದರೆ ಕರ್ನಾಟಕದಲ್ಲಿಯೂ ಸಾಧ್ಯವಾಗಲಿದೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿದರೆ, ಅವರ ಬೇಡಿಕೆಗಳನ್ನು ಈಡೇರಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೊಡ್ಡವರಾಗುತ್ತಾರೆ ಎಂದು ಮುಖ್ಯಮಂತ್ರಿ ಚಂದ್ರು ಸಲಹೆ ನೀಡಿದರು.

ಅತಿಥಿ ಉಪನ್ಯಾಸಕರು ದಕ್ಷತೆಯಿಂದ ಕೆಲಸ ಮಾಡಿದ್ದಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಹಕ್ಕುಗಳ ಬಗ್ಗೆ ತಮ್ಮ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ. ಇದು ಹತ್ತಾರು ವರ್ಷಗಳಿಂದ ಇರುವ ಸಮಸ್ಯೆ. ಅವರ ಭವಿಷ್ಯದ ಸಮಸ್ಯೆ. ಅವರ ಮಕ್ಕಳ ಬದುಕಿನ ಸಮಸ್ಯೆ. ನಿಯಮಗಳ ಪ್ರಕಾರ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಕೈಚೆಲ್ಲುವುದರಲ್ಲಿ ಅರ್ಥವಿಲ್ಲ. ಕಾನೂನು, ನೀತಿ, ನಿಯಮಗಳು ಸಮಾಜದ ಹಿತದೃಷ್ಟಿಗೆ ಅನುಗುಣವಾಗಿರಬೇಕು. ಸಾಧ್ಯವಿಲ್ಲ ಎನ್ನುವುದು ಉತ್ತರವಲ್ಲ, ಸಾಧ್ಯವಾಗಿಸುವುದು ಉತ್ತರವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ನೆಲಮಂಗಲದ ಪವಾಡ ಶ್ರೀ ಬಸವಣ್ಣ ದೇವರ ಮಠದಿಂದ ಸಾಗಿದ ಪಾದಯಾತ್ರೆಯಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ಲೋಹಿತ್‌ ಹನುಮಾಪುರ, ಸಂಘಟನಾ ಕಾರ್ಯದರ್ಶಿ ಜಗದೀಶ್‌ ಚಂದ್ರ ಸೇರಿದಂತೆ ರವಿಕುಮಾರ್ ,ದರ್ಶನ್ ಜೈನ್, ರಾಮಕೃಷ್ಣಪ್ಪ ಹಲವು ಮುಖಂಡರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿ