LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್ ಹೇಳಿದಂತೆ ಕೇಳ್ತೇವೆ'- ಸಿಎಂ, ಡಿಸಿಎಂ ಜಂಟಿ ಹೇಳಿಕೆ

ಬೆಂಗಳೂರು : ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಜಂಟಿ ಹೇಳಿಕೆ ನೀಡಿದ್ದಾರೆ.

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, "ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣ ಆಗಿವೆ. ನಾವಿಬ್ಬರೇ ಕೂತು ಮಾತನಾಡಿದ್ವಿ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಮಗೆ ಬಹಳ ಮುಖ್ಯ. ಅದರ ಬಗ್ಗೆಯೂ ಚರ್ಚೆ ಮಾಡಿದ್ವಿ. 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಅನ್ನೋದ್ರೆ ಬಗ್ಗೆ ಚರ್ಚೆ ಮಾಡಿದ್ವಿ. 2023ರಲ್ಲಿ ಹೇಗೆ ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ವೋ ಅದೇ ರೀತಿ ಮುಂದೆನೂ ಒಟ್ಟಿಗೆ ಕೆಲಸ ಮಾಡ್ತೀವಿ. ನನ್ನ - ಡಿಕೆ ನಡುವೆ ಭಿನ್ನ ಇಲ್ಲ. ನಾವು ಒಟ್ಟಾಗಿದ್ದೇವೆ" ಎಂದು ತಿಳಿಸಿದರು.

"ಇದೇ ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಶುರುವಾಗಲಿದೆ. ಸುಳ್ಳು ಅಪವಾದ ಮಾಡೋದು ಬಿಜೆಪಿ-ಜೆಡಿಎಸ್ ಚಾಳಿ. ಇದನ್ನ ಬಹಳ ಸಮರ್ಥವಾಗಿ ನಾವು ಮತ್ತು ನಮ್ಮ ಸರ್ಕಾರ ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕೆ ಬೇಕಾದ ತಂತ್ರಗಳನ್ನೂ ರೂಪಿಸಿದ್ದೇವೆ" ಎಂದು ಹೇಳಿದರು.

"ನಾವು 142 ಜನ ಇದ್ದೇವೆ. ಅವರು 64 ಜನ ಮಾತ್ರ ಇದ್ದಾರೆ. ಜೆಡಿಎಸ್ ಇರೋದು 18 ಜನ ಮಾತ್ರ. ಅವರಿಬ್ಬರು ಸೇರಿ ಏನೇ ಆರೋಪ ಮಾಡಿದ್ರೂ ಅದೆಲ್ಲವನ್ನ ಸಮರ್ಥವಾಗಿ ಎದುರಿಸುವ ಕೆಲಸ ಮಾಡ್ತೇವೆ. ಬಹಳ ಮುಖ್ಯಮಾಗಿ ಹೈಕಮಾಂಡ್ ಏನ್ ಹೇಳ್ತಾರೆ ಅದನ್ನ ಕೇಳೋಕೆ ತೀರ್ಮಾನ ಮಾಡಿದ್ದೇವೆ ಎಂದರಲ್ಲದೇ, ಕೇಂದ್ರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರೋದ್ರಿಂದ ಹೈಕಮಾಂಡ್ ಇಲ್ಲಿನ ಗೊಂದಲಗಳನ್ನ ನಮಗೇ ಬಗೆಹರಿಸಲು ಹೇಳಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರಲ್ಲ" ಎಂದರು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, "ಹೈಕಮಾಂಡ್‌ನವರು ಏನು ಹೇಳುತ್ತಾರೋ ಅದೇ ರೀತಿ ಕೆಲಸ ಮಾಡಿಕೊಂಡು ಹೋಗಲು ನಿರ್ಧರಿಸಿದ್ದೇವೆ. ನಮ್ಮಲ್ಲಿ ಗುಂಪು ಇಲ್ಲ. ನಮ್ಮದು ಕಾಂಗ್ರೆಸ್ ಗುಂಪು. ಒಟ್ಟಿಗೆ ಸೇರಿ ಕೆಲಸ ಮಾಡಿಕೊಂಡು ಹೋಗುತ್ತೇವೆ. ಶಾಸಕರನ್ನು, ಪಕ್ಷವನ್ನು ಶಕ್ತಿ ಶಾಲಿಯಾಗಿ ಮಾಡುತ್ತೇವೆ. ಬೆಳಗಾವಿ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರನ್ನು ಎದುರಿಸಲು ಪ್ರತಿತಂತ್ರವನ್ನು ರೂಪಿಸಿದ್ದೇವೆ" ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026