LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಚಿವೆ ಬಗ್ಗೆ ಸಿ.ಟಿ ರವಿ ಅಶ್ಲೀಲ ಪದ: ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..?

ನವದೆಹಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಖಂಡಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌ಡಿಕೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಅಂದ್ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ ಎಂದು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೋತ್ಸಾಹಧನ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!ರೈತರಿಗೆ ಗುಡ್ ನ್ಯೂಸ್ .!ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಬಿ.ಎಸ್ಸಿ. ಪದವಿ ಪಠ್ಯದಲ್ಲಿ ಸಾಹಿತಿ ಡಾ.ಬಿ.ಎಲ್.ವೇಣುರವರ ಕಥೆ ಸೇರ್ಪಡೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 05-08-2025.!!ಪುತ್ರದಾ ಏಕಾದಶಿ ದಿನ ದಂಪತಿಗಳು ಹೀಗೆ ಮಾಡಿದರೆ ಸಂತಾನ ಪ್ರಾಪ್ತಿ.!ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ