ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕರ್ನಾಟಕ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು , ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಶಿಸಿದ್ದಾರೆ .
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದರು. ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದರು. ಇದರಿಂದ ಈಶ್ವರಪ್ಪ ಫುಲ್ ಖುಷ್ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವ ಬಗ್ಗೆ ಈಶ್ವರಪ್ಪನವರು ಪ್ರತಿಕ್ರಿಯಿಸಿದ್ದು , ಮೋದಿ ಬೆಳಗ್ಗೆ ಕಾಲ್ ಮಾಡಿದಾಗ ನನಗೆ ಅಚ್ಚರಿ ಆಯ್ತು . ಮೋದಿ ಅವರು ಹೀಗೆ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ಸಂತೋಷವಾಗಿದೆ . ಇದು ಎಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು .
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.