LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏನಿದು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ?

ಬೆಂಗಳೂರು : ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ ಅಥವಾ ಲಿಂಗ ಆಧಾರದ ಮೇಲೆ ದ್ವೇಷದ ಭಾಷಣ ಮಾಡುವವರಿಗೆ ನಿರ್ಬಂಧವಿರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ 2025’ ಅನ್ನು ಅಂಗೀಕರಿಸಿದೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ವಿಧಾನಪರಿಷತ್ ಮತ್ತು ರಾಜ್ಯಪಾಲರ ಅನುಮೋದನೆಯ ನಂತರ ಕಾನೂನಾಗಿ ಜಾರಿಗೆ ಬರುವ ಈ ಮಸೂದೆ ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳನ್ನು ತಡೆಯಲು ಮಹತ್ವದ ಹೆಜ್ಜೆಯಾಗಿದೆ.

ಈ ಮಸೂದೆ ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ ಅಥವಾ ಲಿಂಗ ಆಧಾರದ ಮೇಲೆ ದ್ವೇಷದ ಭಾಷಣ, ಪ್ರಚೋದನೆ ಅಥವಾ ಪ್ರಚಾರ ಮಾಡುವುದನ್ನು ನಿರ್ಬಂಧಿಸುತ್ತದೆ. ಯಾವುದೇ ಮಾಧ್ಯಮ, ಸಾಮಾಜಿಕ ಜಾಲತಾಣ, ಪಠ್ಯ, ಚಿತ್ರ, ಧ್ವನಿ ಅಥವಾ ಡಿಜಿಟಲ್ ತಂತ್ರಾಂಶಗಳ ಮೂಲಕ ದ್ವೇಷವನ್ನು ಹರಡುವುದಕ್ಕೂ ಇದು ಅಡ್ಡಿ ಎತ್ತುತ್ತದೆ. ಸರ್ಕಾರವು ಈ ಕಾನೂನು ಯಾವುದೇ ರಾಜಕೀಯ ಪಕ್ಷ ಅಥವಾ ಸಮುದಾಯವನ್ನು ಗುರಿಯಾಗಿಸಿಲ್ಲವೆಂದು ಸ್ಪಷ್ಟಪಡಿಸಿದೆ ಮತ್ತು ಮುಖ್ಯ ಉದ್ದೇಶ ಸಾಮಾಜಿಕ ಸಾಮರಸ್ಯ ಕಾಪಾಡುವುದು ಮತ್ತು ದ್ವೇಷ ಹರಡುವಿಕೆಯನ್ನು ತಡೆಯುವುದು.

ಮಸೂದೆ ಪ್ರಕಾರ, ಪ್ರಥಮ ದ್ವೇಷಾಪರಾಧಕ್ಕೆ 1 ರಿಂದ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಪುನರಾವರ್ತಿತ ಅಪರಾಧಕ್ಕೆ 2 ರಿಂದ 10 ವರ್ಷಗಳ ಜೈಲು ಮತ್ತು ರೂ. 50,000 ರಿಂದ ರೂ.1,00,000 ದಂಡ ವಿಧಿಸಲಾಗುತ್ತದೆ. ಇಂತಹ ಕೃತ್ಯಗಳನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು, ಈ ಪ್ರಕರಣಗಳ ವಿಚಾರಣೆಯನ್ನು JMF-C ನ್ಯಾಯಾಲಯ ನಡೆಸಲಿದೆ. ಪ್ರಸ್ತುತ, ಭಾರತೀಯ ದಂಡಸಂಹಿತೆಯ ಸೆಕ್ಷನ್ 153A, 295A, 505 ಅನ್ನು ದ್ವೇಷ ಭಾಷಣದ ಪ್ರಕರಣಗಳಿಗೆ ಬಳಸಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026