LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Whatsapp ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..!

ಮಂಗಳೂರು:  ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ  ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ತಾನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಂಡೆ. ನಂತರ ಗ್ರೂಪ್ ಅಡ್ಮಿನ್ ಕಳುಹಿಸಿದ ಲಿಂಕ್ ಒತ್ತಿ ಅದಕ್ಕೂ ಜಾಯಿನ್ ಆದೆ. ಸೆಪ್ಟಂಬರ್ 1ರಿಂದ ಹಣ ಪಾವತಿಸುತ್ತಾ ಬಂದಿರುವೆ. ಬಳಿಕ ತಾನು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಆಗಲಿಲ್ಲ. ಹಾಗೇ ತನ್ನ ಮನೆಯವರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದಾಗ ತಾನು ಮೋಸ ಹೋಗಿರುವ ವಿಚಾರ ತಿಳಿಯಿತು. ಒಟ್ಟಿನಲ್ಲಿ ಸೆ.1ರಿಂದ ಅಕ್ಟೋಬರ್ 7ರವರೆಗೆ ಅಪರಿಚಿತರು ನಕಲಿ ಟ್ರೇಡಿಂಗ್ ಹೆಸರಿನಲ್ಲಿ ತನ್ನಿಂದ 1,25,67,726 ರೂ. ವನ್ನು ಆನ್‌ಲೈನ್ ಮೂಲಕ ಮೋಸ ಮಾಡಿರುವುದಾಗಿ ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದು ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಹೆಂಡತಿ ಮಾತು ಕೇಳದೇ ಏರ್ ಇಂಡಿಯಾ ಹತ್ತಿದ್ರೆ ನಾನೇ ಇರ್ತಿರ್ಲಿಲ್ಲ'- ಡಾ.ಉಮಂಗ್ ಪಟೇಲ್ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲಏರ್ ಇಂಡಿಯಾ ಅಪಘಾತದ ವಿವರಗಳನ್ನು ವಿಶ್ಲೇಷಿಸಲು ಅಹಮದಾಬಾದ್‌’ಗೆ ಬಂದಿಳಿದ ಬೋಯಿಂಗ್ ತಜ್ಞರುಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ- ತುರ್ತು ಭೂಸ್ಪರ್ಶಹಾಸನದ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ! ಹೈ ಅಲರ್ಟ್ಇರಾನ್‌-ಇಸ್ರೇಲ್‌ ಸಂಘರ್ಷ - ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಮೃತ್ಯುಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲುಮಾಟ ಮಂತ್ರ ತೆಗೆಯಬೇಕಾದರೆ ಬೆತ್ತಲಾಗಬೇಕು ಎಂದು ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ಅರ್ಚಕ ಸೆರೆಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ..!!ಮಳೆಯ ಹಿನ್ನೆಲೆ ದ. ಕ ಜಿಲ್ಲೆಯ ಎಲ್ಲಾ ಶಾಲಾ ಹಾಗೂ ಪ. ಪೂ ಕಾಲೇಜುಗಳಿಗೆ ಇಂದು(ಜೂ. 16) ರಜೆ ಘೋಷಣೆ