Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮುಂದಿನ ಹೊಸ ಸಿಜೆಐ ಯಾರು ?

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ನ ಸದ್ಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಇನ್ನು ಕೆಲವೇ ದಿನಗಳಲ್ಲಿ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಹೊಸ ಸಿಜೆಐ ನೇಮಕ ಆಗಬೇಕಾಗಿದ್ದು, ನ್ಯಾ.ಸೂರ್ಯಕಾಂತ್‌ ಅವರ ಹೆಸರನ್ನು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ನ್ಯಾ. ಬಿ.ಆರ್.ಗವಾಯಿ ಅವರು 2025ರ ನವೆಂಬರ್‌ 23ರಂದು ನಿವೃತ್ತಿಯಾಗಲಿದ್ದಾರೆ. ಸಾಂಪ್ರದಾಯಿಕವಾಗಿ, ನಿರ್ಗಮಿತ ಸಿಜೆಐ ಅಧಿಕಾರ ತ್ಯಜಿಸುವ ಒಂದು ತಿಂಗಳ ಮೊದಲು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ನ್ಯಾ. ಗವಾಯಿ ಅವರು ಈಗ ನ್ಯಾ.ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಕೇಂದ್ರ ಸರ್ಕಾರವು ಮುಂದಿನ ಮುಖ್ಯ ನ್ಯಾಯಮೂರ್ತಿ ನೇಮಕದ ಪ್ರಕ್ರಿಯೆ ಆರಂಭಿಸಿದೆ ಎಂದು ಎಎನ್‌ಐ ವರದಿ ಮಾಡಿದೆ,

ಅಧಿಕೃತ ಕಾರ್ಯವಿಧಾನದ ಪ್ರಕಾರ ಕಾನೂನು ಸಚಿವಾಲಯವು ಸಿಜೆಐ ಗವಾಯಿ ಅವರೊಂದಿಗೆ ಸಂಪರ್ಕ ಸಾಧಿಸಿದ್ದು, ತನ್ನ ಉತ್ತರಾಧಿಕಾರಿಯ ಶಿಫಾರಸಿಗೆ ಸೂಚಿಸಿದೆ.

ಯಾರಿದು ನ್ಯಾ. ಸೂರ್ಯಕಾಂತ್?‌

ನ್ಯಾ. ಸೂರ್ಯಕಾಂತ್ ಅವರು ಸದ್ಯ ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಗವಾಯಿ ಹೊರತುಪಡಿಸಿ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. 1962ರ ಫೆ.10ರಲ್ಲಿ ಅವರು ಹರ್ಯಾಣದ ಹಿಸಾರ್‌ ನಲ್ಲಿ ಜನಿಸಿದ್ದರು.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ನ್ಯಾ. ಸೂರ್ಯಕಾಂತ್ ಅವರು 1984 ರಲ್ಲಿ ಹಿಸಾರ್‌ನ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. 1985 ರಲ್ಲಿ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಚಂಡೀಗಢಕ್ಕೆ ತೆರಳಿದರು.

 

2018ರ ಅಕ್ಟೋಬರ್‌ 5ರಂದು ಅವರು ಹಿಮಾಚಲ ಪ್ರದೇಶ ಹೈಕೋರ್ಟ್‌ ನ ನ್ಯಾಯಮೂರ್ತಿಯಾಗಿ ನೇಮಕವಾದರು. 2019ರ ಮೇ 24ರಂದು ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

ನ್ಯಾ. ಸೂರ್ಯಕಾಂತ್ ಪ್ರಸ್ತುತ ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರಾಗಿದ್ದು, ಸಿಜೆಐ ಆಗಿ ನೇಮಕಗೊಂಡರೆ ಅವರು ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.

ನೇಮಕದ ನಂತರ, ಅವರು ನವೆಂಬರ್ 24 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಫೆಬ್ರವರಿ 9, 2027 ರವರೆಗೆ ಸುಮಾರು 15 ತಿಂಗಳ ಕಾಲ ಆ ಹುದ್ದೆಯಲ್ಲಿ ಸೇವೆ ಸಲ್ಲಿಸಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ