Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿ ಲೋಕಸಭಾ ಚುನಾವಣೆ : ಯಾರಾಗಲಿದ್ದಾರೆ ಗೆಲ್ಲುವ ಕುದುರೆ ?

ಬೆಳಗಾವಿ : ಕೊನೆ ಕ್ಷಣದ ಬದಲಾವಣೆ ನಡೆಯದಿದ್ದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ 2024 ರಲ್ಲಿ ಜರುಗಲಿರುವ ಚುನಾವಣೆ ರಾಜ್ಯ ಮಟ್ಟದ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ಬರು ದಿಗ್ಗಜರ ಹೋರಾಟಕ್ಕೆ ಸಾಕ್ಷಿಯಾಗಲಿದೆ.



18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ವಿಶಾಲ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸ್ಪರ್ಧೆಸುವಂಥ ಸೂಕ್ತ ಅಭ್ಯರ್ಥಿಗಳಿಲ್ಲ. ಎರಡೂ ಪಕ್ಷಗಳ ಶಾಸಕರಿಗೆ, ವಿಧಾನ ಪರಿಷತ್ ಸದಸ್ಯರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆಸಲು ಇಷ್ಟವಿಲ್ಲ. ಪಕ್ಷದ ವರಿಷ್ಟರ ಗಮನ ತಮ್ಮ ಕಡೆಗೆ ತಿರುಗದಿರಲಿ ಎಂದು 'ಸೆರಗು ಮುಚ್ಚಿಕೊಂಡು' ತಿರುಗಾಡುವಂತಹ ಸ್ಥಿತಿಗೆ ತಲುಪಿದ್ದಾರೆ.



ನಂಬಲರ್ಹ ಮೂಲಗಳ ಪ್ರಕಾರ ಬಿಜೆಪಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಇಲ್ಲವೇ ಅವರ ಸಹೋದರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದೆ. ಈ ಕುರಿತು ಅವರೊಂದಿಗೆ ಮಾತುಕತೆ ಕೂಡ ಮಾಡಲಾಗಿದೆ. ರಮೇಶ ಜಾರಕಿಹೊಳಿ ಅವರು ಪ್ರಸ್ತಾವನೆಗೆ ಷರತ್ತುಬದ್ಧ ಒಪ್ಪಿಗೆ ನೀಡಿದ್ದು, ತಮ್ಮಿಂದ ತೆರವಾಗುವ ಸ್ಥಾನಕ್ಕೆ ತಮ್ಮ ಪುತ್ರ ಅಮರನಾಥ ಇಲ್ಲವೇ ತಾವು ಸೂಚಿಸುವವರಿಗೆ ಸ್ಪರ್ಧೆಸಲು ಅನುಮತಿಸಬೇಕೆಂದು ಸೂಚಿಸಿದ್ದಾರೆ. ಇದಕ್ಕೆ ಪಕ್ಷ ಕೂಡ ಒಪ್ಪಿಕೊಂಡಿದೆ ಎನ್ನಲಾಗಿದೆ.



ಮುಂದಿನ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಕನಿಷ್ಠ 20 ಸ್ಥಾನಗಳ ಗುರಿ ಹೊಂದಿರುವ ಕಾಂಗ್ರೆಸ್ ಬೆಳಗಾವಿಯ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಚಿಕ್ಕೋಡಿ ಕ್ಷೇತ್ರದ ಕುರಿತು ಇನ್ನೂ ಅಂತಿಮ ನಿರ್ಣಯ ತೆಗೆದುಕೊಳ್ಳದ ಕಾಂಗ್ರೆಸ್  ಪಕ್ಷವು ಬೆಳಗಾವಿ ಕ್ಷೇತ್ರಕ್ಕೆ "ಡಾರ್ಕ ಹಾರ್ಸ " ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ.



ಈ ಮೊದಲು ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಿಂದ ಲೋಕಸಭೆಗೆ ಸ್ಪರ್ಧೆಸಿ ತಮ್ಮ ಯಮಕನಮರಡಿ ಕ್ಷೇತ್ರಕ್ಕೆ ತಮ್ಮ ಪುತ್ರ ರಾಹುಲ್ ಇಲ್ಲವೇ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸುವ ಯೋಜನೆ ಹೊಂದಿದ್ದರೆನ್ನಲಾಗಿದೆ. ಆದರೆ 2028 ರ ಕರ್ನಾಟಕ ವಿಧಾನಸಭೆ ಚುನಾವಣೆ ನಂತರ ತಾವೂ ಮುಖ್ಯಮಂತ್ರಿ ಅಭ್ಯರ್ಥಿ ಆಕಾಂಕ್ಷಿ ಎಂದು ಮೊದಲಿನಿಂದಲೂ ಹೇಳಿಕೊಂಡು ಬರುತ್ತಿರುವ ಅವರು ಈಗ ಲೋಕಸಭೆಗೆ ಸ್ಪರ್ಧೆಸುವುದಿಲ್ಲವೆಂದು ವರಿಷ್ಠರಿಗೆ ತಿಳಿಸಿದ್ದಾರೆ.



ಬಿಜೆಪಿ ಸಂಸದೆ ಮಂಗಳಾ ಅಂಗಡಿ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದು ಬಿಜೆಪಿಗೆ ವರವಾಗಿ ಪರಿಣಮಿಸಿದೆ. ರೈಲ್ವೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಅನಿವಾರ್ಯವಾಗಿ ಸ್ಪರ್ಧಿಸಿದ್ದ ಅವರ ಪತ್ನಿ ಮಂಗಳಾ, 2021 ರಲ್ಲಿ ಜರುಗಿದ ಉಪಚುನಾವಣೆಯಲ್ಲಿ ಪತಿ ಸಾವಿನ ಅನುಕಂಪದ ನಡುವೆ ಕೂಡ ಗೆಲುವಿಗೆ ತುಂಬಾ ಕಷ್ಟ ಪಡಬೇಕಾಗಿತ್ತು. ಮತ ಎಣಿಕೆಯಲ್ಲಿ ಮೊದಲ ಸುತ್ತಿನಿಂದ ಹಿಂದಿದ್ದ ಅವರು ಕೊನೆಯ ಸುತ್ತಿನ ಎಣಿಕೆಯಲ್ಲಿ ಕಾಂಗ್ರೆಸ್ ನ ಬಲಾಡ್ಯ ಸತೀಶ ಜಾರಕಿಹೊಳಿ ಅವರನ್ನು ಕೇವಲ 5,240 ಮತಗಳ ಅಂತರದಿಂದ ಸೋಲಿಸಿದ್ದರು. 2019 ರಲ್ಲಿ ಜರುಗಿದ್ದ ಚುನಾವಣೆಯಲ್ಲಿ ಸುರೇಶ ಅಂಗಡಿ ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಜಯ ಗಳಿಸಿದ್ದರು.



ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಮೇಲೆ ಆಜ್ಞಾಧಾರಕ ಹಿಡಿತ ಹೊಂದಿರುವ ಆರ್ ಎಸ್ ಎಸ್ 2024 ರಲ್ಲಿ ಜರುಗಲಿರುವ ಚುನಾವಣೆ ಕುರಿತು ಎರಡು ಆಂತರಿಕ ಸಮೀಕ್ಷೆ ನಡೆಸಿದ್ದು -- ಸಂಸದೆ ಮಂಗಳಾ ಅವರನ್ನು ಪುನಃ ಪರಿಶೀಲಿಸಿದರೆ ಕಷ್ಟ. ಕಾಂಗ್ರೆಸ್ ವಿರುದ್ಧ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಅಭ್ಯರ್ಥಿ ಪಕ್ಷದಲ್ಲಿ ಯಾರೂ ಇಲ್ಲ. ಸತೀಶ ಜಾರಕಿಹೊಳಿ ಸ್ಪರ್ಧಿಸಿದರೆ ಪಕ್ಷದ ಸೋಲು ಖಚಿತ. ಇರುವವರಲ್ಲಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಇಲ್ಲವೇ ಅವರ ಸಹೋದರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪರ್ಧೆಸಿದರೆ ಕ್ಷೇತ್ರ ಉಳಿಸಿಕೊಳ್ಳಬಹುದು ಎಂದು ವರದಿ ನೀಡಿದೆ.



ಈ ಮೊದಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇಲ್ಲವೇ, ಲಕ್ಷ್ಮಿ ಹೆಬ್ಬಾಳ್ಕರ ಅವರ ಪುತ್ರ ಮೃನಾಲ್ ಹೆಬ್ಬಾಳ್ಕರ ಅವರನ್ನು ಕಣಕ್ಕಿಳಿಸಲು ಯೋಜಿಸಿದ್ದ ಕಾಂಗ್ರೆಸ್,  ಬಿಜೆಪಿಯಿಂದ ರಮೇಶ ಜಾರಕಿಹೊಳಿ ಸ್ಪರ್ಧಿಸಿದರೆ ಗೆಲುವು ಕಷ್ಟವೆಂದು ಅಂದಾಜಿಸಿ ಪ್ರಬಲ ಲಿಂಗಾಯತ ಅಭ್ಯರ್ಥಿಗಾಗಿ ಹುಡುಕಾಡಿ ಕೊನೆಗೆ ಮಾಜಿ ಮುಖ್ಯಮಂತ್ರಿ, ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರನ್ನು ಸ್ಪರ್ಧೆಗೆ ಆಯ್ಕೆ ಮಾಡಿದೆ.



ಬೆಳಗಾವಿ ಲೋಕಸಭಾ ಕ್ಷೇತ್ರ 10 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು ಅದರಲ್ಲಿ 6 ಕಾಂಗ್ರೆಸ್ ಶಾಸಕರಿದ್ದಾರೆ. ಅವರಲ್ಲಿ 5 ಶಾಸಕರು ಲಿಂಗಾಯತರಾಗಿದ್ದಾರೆ. ಆ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 3 ಲಕ್ಷ ಮತಗಳ ಭಾರಿ ಅಂತರಗಳಿಂದ ಗೆಲುವು ಸಾಧಿಸಿದೆ. ಆದರೆ ವಿಶಾಲ ಗೋಕಾಕ ತಾಲೂಕಿನ ಅಲ್ಪಸಂಖ್ಯಾತ ಮತ್ತು ಎಸ್‌ ಸಿ, ಎಸ್‌ ಟಿ ಮತದಾರರು ಸದಾ ರಮೇಶ ಜಾರಕಿಹೊಳಿ ಪರ ನಿಂತಿದ್ದಾರೆ.



ಜಗದೀಶ ಶೆಟ್ಟರ್ ಲಿಂಗಾಯತ ಪಂಚಮಸಾಲಿ ಸಮುದಾಯದಕ್ಕೆ ಸೇರಿದವರಾಗಿರುವುದರಿಂದ ಬೆಳಗಾವಿಯಿಂದ ಅವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಬಹುದು ಎಂದು ಕಾಂಗ್ರೆಸ್ ಭಾವಿಸಿದೆ. ಹಾಗಾಗಿ ಬೆಳಗಾವಿ ಕ್ಷೇತ್ರ ಇಬ್ಬರು ದಿಗ್ಗಜರ ಹೋರಾಟಕ್ಕೆ ಸಾಕ್ಷಿಯಾಗಿ ನಾಡಿನ ಗಮನ ಸೆಳೆಯುವ ಸಾಧ್ಯತೆಯಿದೆ.



ಈ ಕುರಿತು ಜಗದೀಶ ಶೆಟ್ಟರ್ ಅವರು ಸಮದರ್ಶಿಗೆ ಪ್ರತಿಕ್ರಿಯೆ ನೀಡಿದ್ದು, "ಕಾಂಗ್ರೆಸ್ ನನ್ನನ್ನು ಎಂ ಎಲ್ ಸಿ ಯನ್ನಾಗಿ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಕುರಿತು ನನ್ನೊಂದಿಗೆ ಮಾತುಕತೆ ಮಾಡಿಲ್ಲ. ಹಾಗೇನಾದರೂ ಆದರೆ ನನ್ನ ಹಿತೈಷಿಗಳೊಂದಿಗೆ, ಕುಟುಂಬದೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ" ಎಂದಿದ್ದಾರೆ.



ಸಮದರ್ಶಿಯೊಂದಿಗೆ ಮಾತನಾಡಿದ ಬೆಳಗಾವಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಪಕ್ಷ ಜಯಿಸಿರುವ ಆರೂ ಕ್ಷೇತ್ರಗಳಲ್ಲಿ ಲಿಂಗಾಯತರು ಪ್ರಾಬಲ್ಯ ಹೊಂದಿದ್ದಾರೆ. ಶಾಸಕ ಆಸೀಫ ಸೇಠ ಪ್ರತಿನಿಧಿಸುವ ಬೆಳಗಾವಿ ಕ್ಷೇತ್ರದಲ್ಲೂ ಲಿಂಗಾಯತ, ಮುಸ್ಲಿಮ ಮತ್ತು ಅಲ್ಪಸಂಖ್ಯಾತರರು ಅಪಾರ ಸಂಖ್ಯೆಯಲ್ಲಿದ್ದಾರೆ. ಇವರೆಲ್ಲರ ಮತ ಸೇರಿದರೆ ಜಗದೀಶ ಶೆಟ್ಟರ್ ಜಯ ಖಚಿತವೆಂದು ಹೇಳಿದರು.



ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆ - 2021

---------------------------------------------------------



ಒಟ್ಟು ಮತದಾರರು ----- 18, 13, 567

ಪುರುಷ ಮತದಾರರು ----- 9, 11, 033

ಮಹಿಳಾ ಮತದಾರರು -----9, 02, 476

ಒಟ್ಟು ಮತದಾನ ------------9, 85, 674

ಶೇಕಡಾ ---------54.35%

---------------------------

ಮಂಗಳಾ ಅಂಗಡಿ ----------4,40,327

ಸತೀಶ ಜಾರಕಿಹೊಳಿ --------4,35,087

ಗೆಲುವಿನ ಅಂತರ ------5, 240

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ