Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಧ್ಯ ಪ್ರದೇಶದಲ್ಲಿ ಗೆಲುವು ಯಾರಿಗೆ ?

 

ಭೋಪಾಲ್ :
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023 ರಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಪೂರ್ಣ ಬಹುಮತಕ್ಕಿಂತ ಸ್ವಲ್ಪ ಕಡಿಮೆ ಸ್ಥಾನ ಗಳಿಸುವ ಸಾಧ್ಯತೆಯಿದೆ, ಎದುರಾಳಿ ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ ದಾಟಬಹುದು ಎಂದು ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಮಧ್ಯಪ್ರದೇಶ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಕನಿಷ್ಠ 116 ಸ್ಥಾನಗಳನ್ನು ಪಡೆಯಬೇಕು. ಸಮೀಕ್ಷೆಯ ಪ್ರಕಾರ, ಬಿಜೆಪಿ 102-110 ಸ್ಥಾನಗಳನ್ನು ಗೆಲ್ಲಬಹುದು. ಮತ್ತು ಕಾಂಗ್ರೆಸ್ ಪಕ್ಷವು 118-128 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ.
ಮತ ಹಂಚಿಕೆಯ ಬಗ್ಗೆ ಹೇಳುವುದಾದರೆ, ಸಮೀಕ್ಷೆಯ ಹೇಳುವ ಪ್ರಕಾರ ಸದ್ಯಕ್ಕೆ ಎರಡು ಪಕ್ಷಗಳ ನಡುವೆ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿಲ್ಲ. ಬಿಜೆಪಿಯು ಒಟ್ಟು ಶೇ.41.02 ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಶೇ. 40.89ರಷ್ಟು ಮತಗಳನ್ನು ಪಡೆಯಲಿದೆ. ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಶೇ.1.29 ಮತ್ತು ಇತರರು ಶೇ.0.43ರಷ್ಟು ಮತಗಳನ್ನು ಪಡೆಯಬಹುದು ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ.

38 ಸ್ಥಾನಗಳನ್ನು ಹೊಂದಿರುವ ಮಧ್ಯಪ್ರದೇಶದ ಮಹಾಕೌಶಲ್ ಪ್ರದೇಶದಲ್ಲಿ ಬಿಜೆಪಿ 18-22 ಸ್ಥಾನಗಳನ್ನು ಪಡೆಯಬಹುದು ಮತ್ತು ಕಾಂಗ್ರೆಸ್ 16-20 ಸ್ಥಾನಗಳನ್ನು ಗಳಿಸಬಹುದು.

38 ಸ್ಥಾನಗಳನ್ನು ಹೊಂದಿರುವ ಗ್ವಾಲಿಯರ್-ಚಂಬಲ್ ಪ್ರದೇಶದ ಬಗ್ಗೆ ಹೇಳುವುದಾದರೆ, ಬಿಜೆಪಿ 4-8 ಸ್ಥಾನಗಳನ್ನು ಮಾತ್ರ ಪಡೆಯಬಹುದು ಮತ್ತು ಈ ಪ್ರದೇಶದಲ್ಲಿ ಕಾಂಗ್ರೆಸ್ 26-30 ಸ್ಥಾನಗಳನ್ನು ಪಡೆಯಬಹುದು.
36 ಸ್ಥಾನಗಳನ್ನು ಹೊಂದಿರುವ ರಾಜ್ಯದ ಮಧ್ಯ ಭಾಗದಲ್ಲಿ ಬಿಜೆಪಿ 22-24 ಸ್ಥಾನಗಳನ್ನು ಪಡೆಯಬಹುದು ಮತ್ತು ಕಾಂಗ್ರೆಸ್ 12-14 ಸ್ಥಾನಗಳನ್ನು ಗೆಲ್ಲಬಹುದು. 26 ಸ್ಥಾನಗಳನ್ನು ಹೊಂದಿರುವ ಬುಂದೇಲ್‌ಖಂಡ್ ಪ್ರದೇಶದಲ್ಲಿ ಕಾಂಗ್ರೆಸ್ 11-13 ಸ್ಥಾನಗಳನ್ನು ಗಳಿಸಬಹುದು ಮತ್ತು ಬಿಜೆಪಿ 13-15 ಸ್ಥಾನಗಳನ್ನು ಗೆಲ್ಲಬಹುದು.
30 ಸ್ಥಾನಗಳನ್ನು ಹೊಂದಿರುವ ವಿಂಧ್ಯಾ ಪ್ರದೇಶದಲ್ಲಿ ಕೇಸರಿ ಪಕ್ಷವು ಇಲ್ಲಿ ಪ್ರಬಲವಾಗಿ ಹೊರಹೊಮ್ಮಬಹುದು ಮತ್ತು 19-21 ಸ್ಥಾನಗಳನ್ನು ಪಡೆಯಬಹುದು ಮತ್ತು ಕಾಂಗ್ರೆಸ್ ಸುಮಾರು 8-10 ಸ್ಥಾನಗಳನ್ನು ಗೆಲ್ಲಬಹುದು. 66 ಸ್ಥಾನಗಳನ್ನು ಹೊಂದಿರುವ ಮಾಲ್ವಾ ಪ್ರದೇಶದಲ್ಲಿ ಬಿಜೆಪಿ 20-24 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 41-45 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ