LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಷಯ ತೃತೀಯಾ ಏಕೆ ಮತ್ತು ಯಾವಾಗ ಆಚರಿಸುತ್ತೇವೆ?

ಮೂರುವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ಅಕ್ಷಯ ತೃತೀಯಾದಲ್ಲಿ ಎಳ್ಳು ತರ್ಪಣ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇ ರೀತಿ ದಾನ ನೀಡುವ ಪರಂಪರೆ ಇದೆ. 2024 ರಲ್ಲಿ ಮೇ 10 ರಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುವುದು. ಇದರ ಹಿನ್ನೆಲೆಯ ಶಾಸ್ತ್ರವನ್ನು ನಾವು ತಿಳಿದುಕೊಳ್ಳೋಣ. ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು.


ಇಲ್ಲಿ ಮಹತ್ವವಾದ ಅಂಶವೇನೆಂದರೆ, ಹಿಂದೂ ಧರ್ಮವು ಆಪತ್ಕಾಲಕ್ಕಾಗಿ ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ. ಅದನ್ನು ‘ಆಪದ್ಧರ್ಮ’ ಎಂದು ಹೇಳುತ್ತಾರೆ. ಆಪದ್ಧರ್ಮ ಅಂದರೆ ‘ಆಪದಿ ಕರ್ತವ್ಯೋ ಧರ್ಮಃ |’ ಅಂದರೆ ‘ವಿಪತ್ತಿನಲ್ಲಿ ಆಚರಣೆಯಲ್ಲಿ ತರುವಂತಹ ಧರ್ಮ’. ಇಂತಹ ಕಾಲದಲ್ಲಿ ಅಕ್ಷಯ ತೃತೀಯಾ ಬಂದರೆ ಸಂಪತ್ಕಾಲದಲ್ಲಿ ಹೇಳಿದಂತೆ ಕೆಲವು ಧಾರ್ಮಿಕ ಕೃತಿಗಳು ಈ ಸಮಯದಲ್ಲಿ ಮಾಡಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಆಪತ್ಕಾಲದಲ್ಲಿ ಧರ್ಮಾಚರಣೆ ಎಂದು ಏನೆಲ್ಲ ಮಾಡಬಹುದು, ಎಂಬುದರ ಬಗ್ಗೆ ವಿಚಾರವೂ ಮಾಡಲಾಗಿದೆ. ಹಿಂದೂ ಧರ್ಮವು ಮನುಷ್ಯನ ಬಗ್ಗೆ ಎಷ್ಟು ಆಳವಾದ ವಿಚಾರ ಮಾಡಿದೆ, ಎಂಬುದು ಕಲಿಯಲು ಸಿಗುತ್ತದೆ. ಇದರಿಂದ ಹಿಂದೂ ಧರ್ಮದ ಏಕಮೇವಾದ್ವಿತೀಯತೆಯು ಗಮನಕ್ಕೆ ಬರುತ್ತದೆ.


ತಿಥಿ

ವೈಶಾಖ ಶುಕ್ಲ ತೃತೀಯಾ


ಅಕ್ಷಯ ತೃತೀಯಾದಂದು ಇಡೀ ದಿನ ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ. ಈ ದಿನದಂದು ಹಯಗ್ರೀವ ಅವತಾರ, ನರನಾರಾಯಣ ಪ್ರಕಟೀಕರಣ ಮತ್ತು ಪರಶುರಾಮನ ಅವತಾರವಾಗಿದೆ. ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣುವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಯ ಮೇಲೆ ಬರುತ್ತವೆ. ಆದುದರಿಂದ ಪೃಥ್ವಿಯ ಮೇಲಿನ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಈ ಕಾಲಮಹಾತ್ಮೆಯಿಂದಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯಗಳನ್ನು ಮಾಡಿದರೆ ಅವು ಗಳಿಂದ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ. ಈ ತಿಥಿಯಂದು ದೇವತೆಗಳನ್ನು ಮತ್ತು ಪಿತೃಗಳನ್ನು ಉದ್ದೇಶಿಸಿ ಮಾಡಿದ ಎಲ್ಲ ಕರ್ಮಗಳೂ ಅಕ್ಷಯ (ಅವಿನಾಶಿ) ವಾಗುತ್ತವೆ. (ಆಧಾರ : ‘ಮದನರತ್ನ’)


ಅಕ್ಷಯ ತೃತೀಯಾವನ್ನು ಆಚರಿಸುವ ಪದ್ಧತಿ

೧. ಸ್ನಾನದಾನಾದಿ ಧರ್ಮಕಾರ್ಯಗಳು : ಕಾಲವಿಭಾಗದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ. ಈ ದಿನ ಅಪಿಂಡಕ ಶ್ರಾದ್ಧವನ್ನು ಮಾಡಬೇಕು, ಅದು ಸಾಧ್ಯವಿಲ್ಲದಿದ್ದರೆ ಕಡಿಮೆಪಕ್ಷ ಎಳ್ಳಿನ ತರ್ಪಣವನ್ನಾದರೂ ಕೊಡಬೇಕು. ದಾನವು ‘ಸತ್ಪಾತ್ರೇ ದಾನ’ವಾಗಿರಬೇಕು. ಸಂತರಿಗೆ ಅಥವಾ ಸಮಾಜದಲ್ಲಿ ಧರ್ಮಪ್ರಸಾರವನ್ನು ಮಾಡುವ ಆಧ್ಯಾತ್ಮಿಕ ಸಂಸ್ಥೆಗಳಿಗೆ ಮಾಡಿದ ದಾನವು ‘ಸತ್ಪಾತ್ರೇ ದಾನ’ವಾಗಿದೆ. ಸತ್ಪಾತ್ರೇ ದಾನವನ್ನು ಮಾಡುವುದರಿಂದ ದಾನದ ಕರ್ಮವು ಅಕರ್ಮಕರ್ಮವಾಗುತ್ತದೆ. ಅಕರ್ಮಕರ್ಮವೆಂದರೆ ಪಾಪ-ಪುಣ್ಯಗಳ ಲೆಕ್ಕಾಚಾರವು ತಗಲದಿರುವುದು. ಇದರಿಂದ ದಾನವನ್ನು ನೀಡುವವನು ಯಾವುದೇ ಬಂಧನದಲ್ಲಿ ಸಿಲುಕದೇ, ಅವನ ಆಧ್ಯಾತ್ಮಿಕ ಉನ್ನತಿಯಾಗಲು ಸಹಾಯವಾಗುತ್ತದೆ.


ಅಕ್ಷಯ ತದಿಗೆಯ ದಿನ ಎಳ್ಳು ತರ್ಪಣಯನ್ನು ಏಕೆ ಮಾಡುತ್ತಾರೆ?

ಪೂರ್ವಜರಿಗೆ ಗತಿ ಸಿಗುವುದು ಮಹತ್ವ: ಅಕ್ಷಯ ತದಿಗೆಯ ದಿನ ಉಚ್ಚಲೋಕದಿಂದ ಸಾತ್ತ್ವಿಕತೆಯು ಬರುತ್ತಿರುತ್ತದೆ. ಈ ಸಾತ್ತ್ವಿಕತೆಯನ್ನು ಗ್ರಹಣ ಮಾಡಲು ಭುವರ್ಲೋಕದಲ್ಲಿನ ಅನೇಕ ಜೀವಗಳು (ಲಿಂಗದೇಹಗಳು) ಪೃಥ್ವಿಯ ಸಮೀಪಕ್ಕೆ ಬರುತ್ತವೆ. ಭುವರ್ಲೋಕದಲ್ಲಿರುವ ಬಹುತೇಕ ಜೀವಗಳು ಮನುಷ್ಯರ ಪೂರ್ವಜರಾಗಿರುತ್ತಾರೆ ಮತ್ತು ಅವರು ಪೃಥ್ವಿಯ ಸಮೀಪ ಬರುವುದರಿಂದ ಮನುಷ್ಯರಿಗೆ ತೊಂದರೆಯಾಗುವ ಸಾಧ್ಯತೆಯಿರುತ್ತದೆ. ಪೂರ್ವಜರ ಋಣವೂ ಮನುಷ್ಯರ ಮೇಲೆ ಬಹಳಷ್ಟು ಇರುತ್ತದೆ. ಈ ಋಣವನ್ನು ತೀರಿಸಲು ಮನುಷ್ಯನು ಪ್ರಯತ್ನ ಮಾಡುವುದು ಈಶ್ವರನಿಗೆ ಅಪೇಕ್ಷಿತವಾಗಿದೆ. ಪೂರ್ವಜರಿಗೆ ಗತಿ ಸಿಗಬೇಕೆಂದು ಅಕ್ಷಯ ತದಿಗೆಯ ದಿನ ಎಳ್ಳು ತರ್ಪಣಯನ್ನು ಮಾಡುತ್ತಾರೆ.


( ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ- ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು