ಬೆಳಗಾವಿ :
ಭಾರತ ಸರ್ಕಾರದ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿಗೆ ಬೆಳಗಾವಿ ಉತ್ತರ ಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆರವರು ಭೇಟಿ ನೀಡಿದರು.
ಪ್ರಹ್ಲಾದ ಜೋಶಿ ಅವರು ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯ ರಾಜ್ಯದ ಪ್ರಭಾರಿಯಾಗಿ ನೇಮಕಗೊಂಡಿದ್ದಕ್ಕಾಗಿ ಅವರನ್ನು ಈ ವೇಳೆ ಅಭಿನಂದಿಸಿದರು.
ಪ್ರಧಾನಿ ನರೇಂದ್ರ ಮೋದಿಜಿರವರ ಕನಸಿನ ಯೋಜನೆಯಾದ ವಂದೇ ಭಾರತ ರೈಲನ್ನು ಬೆಳಗಾವಿಯಿಂದ ಮುಂಬೈಗೆ ವಿಸ್ತರಿಸುವಂತೆ ಮನವಿ ಮಾಡಿದರು. ಬೆಳಗಾವಿ ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತು ಚರ್ಚಿಸಿದರಲ್ಲದೆ ಬೆಳಗಾವಿಯಿಂದ ನವ ದೆಹಲಿಗೆ ವಿಮಾನ ಸೇವೆಯನ್ನು ಪುನರಾರಂಭಿಸುವ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅನಿಲ ಬೆನಕೆ ಅವರು ತಿಳಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.