LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?

ಹೈದರಾಬಾದ್: ರಾಜಮೌಳಿಯ ಸಿನಿಮಾ ಸೇರಿದಂತೆ ತೆಲುಗಿನ ಎಲ್ಲ ಸಿನಿಮಾಗಳ ಚಿತ್ರೀಕರಣ ಸೋಮವಾರದಿಂದ (ಆ.4) ದಿಢೀರ್ ಸ್ಥಗಿತಗೊಂಡಿದೆ. ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್ (ತೆಲುಗು ಸಿನಿಮಾ ಕಾರ್ಮಿಕರ ಒಕ್ಕೂಟ) ಬಂದ್‌ಗೆ ಕರೆ ನೀಡಿದೆ.

24 ವಿವಿಧ ವಿಭಾಗಗಳ ಸಿನಿಮಾ ಕಾರ್ಮಿಕರುಗಳ ಒಕ್ಕೂಟ ಇದಾಗಿದ್ದು, ತನ್ನ ಸುಪರ್ದಿಗೆ ಬರುವ 24 ವಿಭಾಗದ ಕಾರ್ಮಿಕರುಗಳಿಗೆ ಏಕಾ ಏಕಿ ಸಿನಿಮಾ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದಾಗಿ ಸೋಮವಾರದಿಂದ ತೆಲುಗಿನ ಎಲ್ಲ ಸಿನಿಮಾ, ವೆಬ್ ಸಿರೀಸ್‌ಗಳ ಚಿತ್ರೀಕರಣಗಳು ಬಂದ್ ಆಗಿವೆ. ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್, ತೆಲುಗು ಸಿನಿಮಾ ಕಾರ್ಮಿಕರ ದಿನಗೂಲಿ ಮೊತ್ತ ಹೆಚ್ಚಿಸುವಂತೆ ನಿರ್ಮಾಪಕರ ಸಂಘದೊಂದಿಗೆ ಕೆಲ ತಿಂಗಳುಗಳಿಂದಲೂ ಸಭೆ ನಡೆಸುತ್ತಲೇ ಇತ್ತು.

ಸಿನಿಮಾ ನಾಯಕರ ಸಂಭಾವನೆ ಹೆಚ್ಚಾಗಿದೆ. ನಟ-ನಟಿಯರ ಸಂಭಾವನೆ ಹೆಚ್ಚಾಗಿದೆ. ಒಟಿಟಿ ಇನ್ನಿತರೆ ಕಾರಣಕ್ಕೆ ಸಿನಿಮಾ ನಿರ್ಮಾಪಕರಿಗೆ ಬರುವ ಲಾಭ ಹತ್ತು ಪಟ್ಟಾಗಿದೆ. ಆದರೆ ಸಿನಿಮಾ ಕಾರ್ಮಿಕರ ದಿನಗೂಲಿ ವರ್ಷಗಳಿಂದಲೂ ಏರಿಕೆ ಆಗಿಲ್ಲ. ಹಾಗಾಗಿ ಕಾರ್ಮಿಕರ ದಿನಗೂಲಿಯನ್ನು 30% ಹೆಚ್ಚಳ ಮಾಡುವಂತೆ ಒತ್ತಾಯ ಮಾಡಲಾಗಿತ್ತು. ಇದಕ್ಕೆ ನಿರ್ಮಾಪಕ ಸಂಘ ಒಪ್ಪಿಲ್ಲ. ಇದೇ ಕಾರಣಕ್ಕೆ ಹೈದರಾಬಾದ್ನಲ್ಲಿ ಸಭೆ ನಡೆಸಿದ ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್ ಮುಖಂಡರು, ಸೋಮವಾರದಿಂದಲೇ ಸಿನಿಮಾಗಳ ಚಿತ್ರೀಕರಣ ಬಂದ್ ಮಾಡುವಂತೆ ಕರೆ ನೀಡಿದ್ದಾರೆ. ಆದರೆ ಯಾವ ನಿರ್ಮಾಣ ಸಂಸ್ಥೆ ಹೊಸ ದಿನಗೂಲಿ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹೆಚ್ಚುವರಿ ಕೂಲಿ ನೀಡುತ್ತಿದೆಯೋ ಆ ಸಿನಿಮಾಗಳ ಕೆಲಸಗಳು ಮಾತ್ರವೇ ಮುಂದುವರಿದಿವೆ.

ಹಳೆ ದಿನಗೂಲಿ ವ್ಯವಸ್ಥೆ ಹೊಂದಿರುವ ಸಿನಿಮಾಗಳ ಚಿತ್ರೀಕರಣಗಳು ಬಂದ್ ಆಗಿವೆ. ಹಬ್ಬಗಳ ಸಮಯ ಹತ್ತಿರವಿದ್ದು ಹಲವು ಸಿನಿಮಾಗಳು ಬಿಡುಗಡೆ ದಿನಾಂಕ ಘೋಷಿಸಿ ಲಘು-ಬಗೆಯಲ್ಲಿ ಚಿತ್ರೀಕರಣ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಸಿನಿಮಾ ಕಾರ್ಮಿಕರ ಈ ಪ್ರತಿಭಟನೆ ಸಿನಿಮಾ ತಂಡಗಳಿಗೆ ಭಾರೀ ಹೊಡೆತ ನೀಡಲಿದೆ. ಹಲವು ದೊಡ್ಡ ಸ್ಟಾರ್ ನಟರ ಸಿನಿಮಾಗಳ ಚಿತ್ರೀಕರಣ ನಡೆಯುತ್ತಿವೆ. ರಾಜಮೌಳಿ-ಮಹೇಶ್ ಬಾಬು ಸಿನಿಮಾ, ಪ್ರಭಾಸ್ ನಟನೆಯ ಎರಡು ಸಿನಿಮಾ, ಚಿರಂಜೀವಿ ನಟನೆಯ ಎರಡು ಸಿನಿಮಾ, ಜೂ ಎನ್ಟಿಆರ್ ನಟನೆಯ ಪ್ರಶಾಂತ್ ನೀಲ್ ಜತೆಗಿನ ಸಿನಿಮಾ, ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಹೀಗೆ ಹಲವು ಸಿನಿಮಾಗಳ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಈಗ ಈ ಎಲ್ಲ ಸಿನಿಮಾಗಳ ಚಿತ್ರೀಕರಣ ಬಂದ್ ಆಗಿದೆ. ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026