LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಿಎಂ, ಡಿಸಿಎಂ ನಾಯಕತ್ವ ಬದಲಾವಣೆ ಇಲ್ಲವೆಂದು ಹೇಳಿದ ಮೇಲೆ ಚರ್ಚೆ ಯಾಕೆ'- ಪ್ರಿಯಾಂಕ್ ಖರ್ಗೆ

ಬೆಂಗಳೂರು : ಎಐಸಿಸಿ ಅಧ್ಯಕ್ಷರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಉಸ್ತುವಾರಿ ಸುರ್ಜೇವಾಲಾ ಅವರೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿರುವಾಗ ಚರ್ಚೆ ಯಾಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ನಾನೇ 5 ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿ ಅಭಿಪ್ರಾಯ ಸಂಗ್ರಹವೇ ಮಾಡಿಲ್ಲ. ಯಾರೋ ಇಬ್ಬರು ಮಾತನಾಡಿದ್ದರೆ ಅದೇನು ದೊಡ್ಡದಲ್ಲ ಅಂತ ಹೇಳಿದ್ದಾರೆ. ನಾಯಕತ್ವದ ಬದಲಾವಣೆ ಅಭಿಪ್ರಾಯವೇ ತೆಗೆದುಕೊಳ್ಳದೇ ಇರುವಾಗ ಸಂಖ್ಯಾಬಲದ ಚರ್ಚೆ ಎಲ್ಲಿ ಬರುತ್ತದೆ ಎಂದರು.

ನಾನು, ಡಿಕೆ ಶಿವಕುಮಾರ್ ಹೈಕಮಾಂಡ್ ಏನ್ ಹೇಳುತ್ತದೋ ಅದನ್ನು ಪಾಲನೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿಎಂ ಕುರ್ಚಿ ಖಾಲಿ ಇಲ್ಲ ಎಂದಿದ್ದಾರೆ. ಹೈಕಮಾಂಡ್ ಸ್ಪಷ್ಟವಾಗಿ ನಾಯಕತ್ವದ ಬಗ್ಗೆ ಹೇಳಿದ ಮೇಲೆ ಎಲ್ಲವೂ ಮುಗಿಯಿತು ಎಂದು ಸ್ಪಷ್ಟನೆ ನೀಡಿದರು.

ದೆಹಲಿಗೆ ಹೋಗಬಾರದು, ಹೈಕಮಾಂಡ್ ಗೆ ಭೇಟಿಯಾಗಬಾರದು ಅಂದರೆ ಹೇಗೆ? ನವೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ ಎನ್ನುವುದು ವಿಷಯವೇ ಅಲ್ಲ. ಮಾಧ್ಯಮಗಳ ಮುಂದೆ ಪಕ್ಷದ ವಿಚಾರ ಹೇಳಿದರೆ ತೀರ್ಮಾನವಾಗುವುದಿಲ್ಲ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026