LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಸಿಎಂ ವಿರುದ್ಧ ದೂರು ನೀಡಿಲ್ಲವೇಕೆ'?-ವಿಜಯೇಂದ್ರ

ಬೆಂಗಳೂರು : ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ.

ತದನಂತರ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್‍ನವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಹೊರಟ್ಟಿಯವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಾಗಿದೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರಿಸಿದರು.

ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದರು. ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಕೇಳಿದರು. ಇದು ಕೂಡ ಚರ್ಚೆ ಆಗಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಎಲ್ಲ ಇಲಾಖೆಗಳಲ್ಲಿ ಸಂಬಳ ನೀಡಲಾಗದ ಪರಿಸ್ಥಿತಿ

ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ; ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತೋ ಕಾದು ನೋಡೋಣ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ; ಕಾಂಗ್ರೆಸ್ ಸರಕಾರದ ಬಗ್ಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026