LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹ ಸಚಿವರ ಬದಲಾವಣೆಗೆ ಮಂಗಳೂರಿನಲ್ಲಿ ವ್ಯಾಪಕ ಒತ್ತಾಯ!

ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಹುಟ್ಟಿಸುತ್ತಿದೆ. ಬಾಳಿ ಬದುಕಬೇಕಾದ ತರುಣರು ಬೀದಿಯಲ್ಲಿ ಹೆಣ ಆಗುತ್ತಿದ್ದಾರೆ. ಇದಕ್ಕೆ ಕೊನೆ ಯಾವಾಗ ಎನ್ನುವ ಪ್ರಶ್ನೆಗಳು ಇದೀಗ ವ್ಯಾಪಕವಾಗಿ ಕೇಳಿ ಬರುತ್ತಿದೆ.

ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಪ್ರಕರಣಗಳನ್ನು ಅಧ್ಯಯನ ಮಾಡಿ, ಕರಾವಳಿಯಲ್ಲಿ ಶಾಶ್ವತವಾಗಿ ಶಾಂತಿ ಸ್ಥಾಪನೆ ಮಾಡುವಲ್ಲಿ ವಿಫಲವಾಗಿದೆ. ಇತ್ತೀಚೆಗಷ್ಟೇ ಸುಹಾಸ್ ಮರ್ಡರ್ ಕೇಸ್ ವೇಳೆ, ಜಿಲ್ಲೆಗೆ ಆಗಮಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್  ಆ್ಯಂಟಿ ಕಮ್ಯುನಲ್ ಫೋರ್ಸ್ ಮಾಡುವ ಬಗ್ಗೆ ಚಿಂತನೆ ನಡೆಸುವುದಾಗಿ ಹೇಳಿದ್ದರು. ಆದರೆ, ಬೆಂಗಳೂರಿಗೆ ಮುಟ್ಟುತ್ತಿದ್ದಂತೆಯೇ ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಮರೆತು ಬಿಟ್ಟಂತಿದೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.

ಸದ್ಯ ಗೃಹ ಸಚಿವರನ್ನು ಬದಲಾವಣೆ ಮಾಡಬೇಕು ಎನ್ನುವ ಒತ್ತಾಯ ಮಂಗಳೂರಿನಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿದೆ. ಕರಾವಳಿಯಲ್ಲಿ ಕೋಮುಕೃತ್ಯಗಳು ನಿಲ್ಲಬೇಕಾದರೆ ಸಮರ್ಥ ಗೃಹ ಸಚಿವರ ಅಗತ್ಯವಿದೆ. ಕಾಂಗ್ರೆಸ್ ನಲ್ಲಿ ನೇರ ಹಾಗೂ ನಿಷ್ಠೂರ ಮಾತುಗಳ ಮೂಲಕ ಜನಪ್ರಿಯವಾಗಿರುವ ಬಿ.ಕೆ.ಹರಿಪ್ರಸಾದ್ ಅವರು ಗೃಹ ಸಚಿವ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎನ್ನುವ ಮಾತುಗಳು ಮಂಗಳೂರಿನಾದ್ಯಂತ ಕೇಳಿ ಬಂದಿದೆ.ರಾಜ್ಯ ಸರ್ಕಾರವು ಮಂಗಳೂರಿನಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳ ಬಗ್ಗೆ ವಿಭಿನ್ನವಾದ ರೀತಿಯಲ್ಲಿ ಕ್ರಮಕೈಗೊಳ್ಳಬೇಕು. ಮಂಗಳೂರಿನ ಕ್ರೈಂ ಜಗತ್ತಿನ  ಆಳ ಅಗಲ ತಿಳಿದಿರುವ ಹಿರಿಯ ಪತ್ರಕರ್ತರ ಅಭಿಪ್ರಾಯ ಪಡೆದು ವಾಸ್ತವಾಂಶಗಳನ್ನು ಅರಿತು ಅಪರಾಧ ತಡೆಗೆ ಸೂಕ್ತ ಕ್ರಮವನ್ನು ಜರುಗಿಸಬೇಕು ಎನ್ನುವ ಒತ್ತಾಯಗಳು ಕೂಡ ಕೇಳಿ ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026