Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಪತ್ನಿಯ ಅನಾರೋಗ್ಯ ಹಿನ್ನೆಲೆ: ಇಂದೋರ್ ರಾಜ್ಯಪಾಲ ಗೆಹ್ಲೋಟ್; ಸಿಎಂ ಸಿದ್ದರಾಮಯ್ಯ ಮುಂದೆ ಆಯ್ಕೆಗಳ ಚರ್ಚೆ

ಬೆಂಗಳೂರು: ತಮ್ಮ ಪತ್ನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿನ್ನೆ ಬುಧವಾರ ತಡರಾತ್ರಿ ದಿಢೀರ್ ಆಗಿ ಇಂದೋರ್‌ಗೆ ಪ್ರಯಾಣ ಬೆಳೆಸಿದ್ದು, ಇಂದು ಬೆಳಗ್ಗೆ ತಲುಪಿದ್ದಾರೆ. ಅವರ ವಾಪಸ್ ಆಗುವ ಸಮಯ ಇನ್ನೂ ನಿಗದಿಯಾಗಿಲ್ಲ ಎಂದು ಲೋಕಭವನದ ಮೂಲಗಳು ತಿಳಿಸಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆ ಮುಂದೂಡಲ್ಪಡುತ್ತದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಖುದ್ದು ಭೇಟಿಗೆ ರಾಜ್ಯಪಾಲರು ಲಭ್ಯವಿಲ್ಲದ ಕಾರಣ ಅವರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ. ರಾಜ್ಯಪಾಲರ ಪತ್ನಿಯ ಅನಾರೋಗ್ಯದ ಬಗ್ಗೆ ನಿನ್ನೆ ರಾತ್ರಿ ಮಾಹಿತಿ ಬಂದ ತಕ್ಷಣವೇ ಅವರು ಇಂದೋರ್‌ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪತ್ನಿಯ ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕವೇ ಅವರು ವಾಪಸ್ ಆಗುವ ಸಾಧ್ಯತೆ ಇದೆ. ಈ ಕುರಿತು ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಲೋಕಭವನ ಮೂಲಗಳು ಹೇಳಿವೆ.

ಹಾಗಾದರೆ ರಾಜೀನಾಮೆ ಸಲ್ಲಿಕೆಗೆ ಬೇರೆ ಆಯ್ಕೆಗಳಿಲ್ಲವೇ ಎಂಬ ಪ್ರಶ್ನೆಯೂ ಮೂಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಬಹುದು ಎಂಬ ಸಾಧ್ಯತೆ ಇದೆ. ನಂತರ ಅದನ್ನು ಲೋಕಭವನದಿಂದಲೇ ರಾಜ್ಯಪಾಲರಿಗೆ ಕಳುಹಿಸುವ ವ್ಯವಸ್ಥೆ ಆಗಬಹುದು.

ಇಂದೋರ್‌ನಿಂದ ವಾಪಸ್ ಬಂದ ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ಅವರನ್ನು ಲೋಕಭವನಕ್ಕೆ ಕರೆಸಿ ಮಾತುಕತೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರು ಯಾವಾಗ ವಾಪಸ್ ಆಗುತ್ತಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ