Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಲೆ ಮಹದೇಶ್ವರ ಬೆಟ್ಟದಲ್ಲಿ ಕಾಡುಮೃಗ ಭೀತಿ: ಚಿರತೆಗೆ ಬಾಲಕ ಬಲಿ

ಮೈಸೂರು: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಸಮೀಪದ ನಾಗಮಲೆ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದ ದುರ್ಘಟನೆಯಲ್ಲಿ ಬೆಂಗಳೂರಿನ 10 ವರ್ಷದ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ.

ಕಳೆದ ಕೆಲವು ದಿನಗಳಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಎರಡನೇ ಚಿರತೆ ದಾಳಿ ಇದಾಗಿದ್ದು, ಯಾತ್ರಾರ್ಥಿಗಳು ಮತ್ತು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಹರ್ಷಿತ್ ಎಂಬ ಬಾಲಕ ತನ್ನ ಕುಟುಂಬದೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ನಾಗಮಲೆ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದಾಗ ಏಕಾಏಕಿ ಬಂದ ಚಿರತೆ ಬಾಲಕನ ಮೇಲೆ ದಾಳಿ ನಡೆಸಿ, ಪೋಷಕರ ಕಣ್ಣೆದುರೇ ಎಳೆದೊಯ್ದು ಹತ್ಯೆ ಮಾಡಿದೆ.

ಘಟನೆಯ ಸುಮಾರು ಅರ್ಧ ಗಂಟೆಯ ಬಳಿಕ ಬಾಲಕನ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ಕುತ್ತಿಗೆ ಸೇರಿದಂತೆ ದೇಹದ ಹಲವೆಡೆ ಗಂಭೀರ ಗಾಯಗಳಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚರಣೆ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ನೀಡಲಾಗಿರಲಿಲ್ಲ. ಅಪಾರ ಸಂಖ್ಯೆಯ ಭಕ್ತರು ಇದ್ದರೂ ಚಿರತೆ ದಾಳಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕುಟುಂಬದ ಸದಸ್ಯರು ಅಳಲು ತೋಡಿಕೊಂಡಿದ್ದಾರೆ.

ಚಿರತೆ ದಾಳಿಗಳ ಸರಣಿ ಹೊಸದೇನಲ್ಲ. ಜನವರಿ 21ರಂದು ಮಂಡ್ಯ ಜಿಲ್ಲೆಯ ಚೀರನಹಳ್ಳಿಯಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಪ್ರವೀಣ್ ಚಿರತೆ ದಾಳಿಯಿಂದ ಸಾವನ್ನಪ್ಪಿದ್ದರು. ಫೆಬ್ರವರಿ 10ರಂದು ಚನ್ನಪಟ್ಟಣ ತಾಲೂಕಿನ ಶ್ರೇಯಸ್ ಎಂಬ ಬಾಲಕಿ ಚಿರತೆ ದಾಳಿಯಲ್ಲಿ ಗಾಯಗೊಂಡಿದ್ದಳು. ಇಂತಹ ಘಟನೆಗಳು ಮರುಕಳಿಸುತ್ತಿದ್ದರೂ ಭಕ್ತರ ಸುರಕ್ಷತೆಗಾಗಿ ಸಂಬಂಧಪಟ್ಟ ಇಲಾಖೆ ಮತ್ತು ಆಡಳಿತ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ