Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Vijayanagara

ವನ್ಯಜೀವಿಗಳಿಗೂ ಮಾನವರಷ್ಟೇ ಬದುಕುವ ಹಕ್ಕಿದೆ: ಎಸ್ಪಿ ಜಾಹ್ನವಿ


ವಿಜಯನಗರ (ಹೊಸಪೇಟೆ) ಅ.8: ಮಾನವನಿಗೆ ಎಷ್ಟು ಹಕ್ಕುಗಳಿವೆಯೋ, ಅಷ್ಟೇ ಹಕ್ಕುಗಳು ವನ್ಯಜೀವಿಗಳಿಗೂ ಇವೆ. ಮೂಕ ಜೀವಿಗಳು ತಮ್ಮ ಹಕ್ಕುಗಳ ಉಲ್ಲಂಘನೆಯಾದಾಗ ಪ್ರಶ್ನಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಅವುಗಳ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಕರೆ ನೀಡಿದರು.
ತಾಲ್ಲೂಕಿನ ಕಮಲಾಪುರ ದರೋಜಿ ನಿಸರ್ಗಧಾಮ ಅರಣ್ಯ ಪ್ರದೇಶದಲ್ಲಿ ಗುರುವಾರ ಆಯೋಜಿಸಲಾಗಿದ್ದ 72ನೆಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಮೇಲೆ ಬದುಕುವ ಹಕ್ಕು ಪ್ರತಿಯೊಂದು ಜೀವಿಗೂ ಸಮಾನವಾಗಿದೆ. ಮಾನವರು ಇತರ ಜೀವಿಗಳೊಂದಿಗೆ ಶಾಂತಿಯುತವಾಗಿ ಸಹಬಾಳ್ವೆ ನಡೆಸುವ ಮೂಲಕ ಪ್ರಕೃತಿಯ ಸಮತೋಲನವನ್ನು ಕಾಪಾಡಬೇಕಿದೆ ಎಂದರು. ವನ್ಯಜೀವಿಗಳು ತಮ್ಮ ಸಮಸ್ಯೆಗಳನ್ನು ಮನುಷ್ಯರಂತೆ ವ್ಯಕ್ತಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಸಂವಹನ ನಡೆಸುವ ಸಾಮರ್ಥ್ಯ ಹೊಂದಿರುವ ನಾವು ಅವುಗಳ ಧ್ವನಿಯಾಗಿ ನಿಲ್ಲಬೇಕು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಅರಣ್ಯ ನಾಶ ಹಾಗೂ ವನ್ಯಜೀವಿಗಳ ಸಂಖ್ಯೆ ಕ್ಷೀಣಿಸುವುದರಿಂದ ಪರಿಸರದ ಸಮತೋಲನದಲ್ಲಿ ಏರುಪೇರು ಉಂಟಾಗಿ ಹವಾಮಾನ ವೈಪರೀತ್ಯ, ಮಳೆಯ ಕೊರತೆ ಹಾಗೂ ನೀರಿನ ಅಭಾವ ಸೇರಿದಂತೆ ಹಲವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಅರಣ್ಯ ಇಲಾಖೆಯೊಂದರ ಹೊಣೆಗಾರಿಕೆ ಮಾತ್ರವಲ್ಲ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಿ ಸಂರಕ್ಷಣಾ ಕಾರ್ಯಗಳಲ್ಲಿ ಭಾಗಿಯಾಗಬೇಕು. ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಅರಣ್ಯ ಒತ್ತುವರಿ ತಡೆಯುವುದು ಹಾಗೂ ಕಾಡ್ಗಿಚ್ಚು ನಿಯಂತ್ರಣಕ್ಕೆ ಸಹಕರಿಸುವಂತಹ ಸಣ್ಣ ಸಣ್ಣ ಹೆಜ್ಜೆಗಳ ಮೂಲಕವೂ ಪರಿಸರ ರಕ್ಷಣೆಗೆ ಮಹತ್ವದ ಕೊಡುಗೆ ನೀಡಬಹುದು ಎಂದರು.
ಜಿಲ್ಲಾ ಉಪಸಂರಕ್ಷಣಾಧಿಕಾರಿ ಅನುಪಮಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಅಕ್ಟೋಬರ್ 2ರಿಂದ 9ರವರೆಗೆ ಶಾಲಾ-ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳು, ಬೈಕ್ ರ‍್ಯಾಲಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಆವಾಸಸ್ಥಾನಗಳನ್ನು ಜೋಡಿಸುವುದು, ವನ್ಯಜೀವಿಗಳನ್ನು ರಕ್ಷಿಸುವುದು ಎಂಬ ಆಶಯದಡಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ರಸ್ತೆ, ಕಾಲುವೆ, ಡ್ಯಾಂ ಹಾಗೂ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಂದ ಕಾಡುಗಳು ಪ್ರತ್ಯೇಕ ಪ್ರದೇಶಗಳಾಗಿ ವಿಭಜನೆಯಾಗುತ್ತಿವೆ. ಇದರಿಂದ ವನ್ಯಜೀವಿಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ಅಡ್ಡಿಯುಂಟಾಗಿ, ಅವುಗಳ ಸಂಚಾರ ಹಾಗೂ ಆಹಾರ ಹುಡುಕಾಟಕ್ಕೆ ತೊಂದರೆಯಾಗುತ್ತಿದೆ. ಇದರ ಪರಿಣಾಮವಾಗಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವುದರ ಜೊತೆಗೆ ಪ್ರತಿವರ್ಷ ಅನೇಕ ವನ್ಯಜೀವಿಗಳು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು. ಕಾಡು ಎಂದರೆ ಕೇವಲ ಮರ-ಗಿಡಗಳ ಸಮೂಹವಲ್ಲ. ಅದೊಂದು ಸಂಕೀರ್ಣ ಪರಿಸರ ವ್ಯವಸ್ಥೆ. ಪದೇಪದೇ ಸಂಭವಿಸುವ ಕಾಡ್ಗಿಚ್ಚಿನಿಂದ ಕ್ರಿಮಿಕೀಟಗಳು, ಚಿಟ್ಟೆಗಳು ಸೇರಿದಂತೆ ಹಲವು ಜೀವಿಗಳು ಹಾಗೂ ಸಸ್ಯ ಪ್ರಭೇದಗಳು ನಾಶವಾಗುತ್ತವೆ. ಚಿಟ್ಟೆ ಮತ್ತು ಜೇನುನೊಣಗಳಂತಹ ಪರಾಗಸ್ಪರ್ಶಕ ಜೀವಿಗಳ ಸಂಖ್ಯೆ ಕುಸಿದರೆ ಪರಾಗಸ್ಪರ್ಶ ಪ್ರಕ್ರಿಯೆ ಮೇಲೆ ಪರಿಣಾಮ ಬಿದ್ದು ಕೃಷಿ ಇಳುವರಿ ಕಡಿಮೆಯಾಗಬಹುದು. ಇದು ಮುಂದಿನ ದಿನಗಳಲ್ಲಿ ಆಹಾರ ಭದ್ರತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಅರಣ್ಯವನ್ನು ಸಂರಕ್ಷಿಸುವುದು ಕೇವಲ ವನ್ಯಜೀವಿಗಳಿಗಾಗಿ ಮಾತ್ರವಲ್ಲ, ಮಾನವ ಆರೋಗ್ಯ ಮತ್ತು ಭವಿಷ್ಯಕ್ಕಾಗಿ ಕೂಡ ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಮಲಾಪುರ ದರೋಜಿ ನಿಸರ್ಗಧಾಮದಲ್ಲಿ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ ಮಾಡಲಾಯಿತು. ಅರಣ್ಯ ಇಲಾಖೆಯಿಂದ ವನ್ಯಜೀವಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲೆ, ಪ್ರಬಂಧ ಸೇರಿದಂತೆ ವಿವಿದ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಹಾಗೂ ಬಹುಮಾನ ವಿತರಿಸಲಾಯಿತು.
ಈ ವೇಳೆ ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ ನಾಯಕ್, ಬಳ್ಳಾರಿ ಉಪಸಂರಕ್ಷಣಾಧಿಕಾರಿ ಮಾರ್ಕಂಡೇಯ, ವನ್ಯಜೀವಿ ಸಂರಕ್ಷಕರು ಹಾಗೂ ಪರಿಸರವಾದಿಗಳಾದ ಪಂಪಯ್ಯ ಸ್ವಾಮಿ, ಉರುಗ ತಜ್ಞ ವೇಣುಗೋಪಾಲ್ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು, ಉಪ ವಲಯ ಅರಣ್ಯಾಧಿಕಾರಿಗಳು, ಗಸ್ತು ವನಪಾಲಕರು, ಅರಣ್ಯ ವೀಕ್ಷಕರು ಇದ್ದರು.
*-*-*-*

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ