Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಚುನಾವಣೆಗೆ ಸ್ಪರ್ಧಿಸುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ಹೈಕೋರ್ಟ ತಡೆ

ಲಖನೌ, ಅ. 19: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿ ನಂದನ್‌ಲಾಲ್ ರೈ ಅಲಿಯಾಸ್ ಬಬ್ಲೂ ರೈ ಅವರ ಜೀವಾವಧಿ ಶಿಕ್ಷೆ ಹಾಗೂ ದೋಷನಿರ್ಣಯಕ್ಕೆ ಅಲಹಾಬಾದ್ ಹೈಕೋರ್ಟ ಮಧ್ಯಂತರ ತಡೆ ನೀಡಿದೆ.

ರಾಮಜನ್ಮಭೂಮಿ ಚಳವಳಿಯ ಕಾರ್ಯಕರ್ತ ಪ್ರಮೋದ ಕುಮಾರ ನಿಗಮ ಅವರ ಕೊಲೆ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು 2025ರ ಏಪ್ರಿಲ್‌ನಲ್ಲಿ ನಂದನ್‌ಲಾಲ್ ರೈಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟಗೆ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಸಿದ್ಧಾರ್ಥ್ ಹಾಗೂ ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡ ಪೀಠವು ಅಕ್ಟೋಬರ್ 5ರಂದು ಶಿಕ್ಷೆ ಮತ್ತು ದೋಷನಿರ್ಣಯಕ್ಕೆ ತಡೆ ನೀಡಿ ಜಾಮೀನು ಮಂಜೂರು ಮಾಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.

ವಿಚಾರಣೆ ವೇಳೆ ರೈ ಪರ ವಕೀಲರು, ತಮ್ಮ ಕಕ್ಷಿದಾರರು ಶಿಕ್ಷೆಯಾಗುವ ಮೊದಲು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ಬಯಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಕೊಲೆ ಪ್ರಕರಣದ ತನಿಖೆಯಲ್ಲಿ ರೈ ಅವರ ಹೆಸರನ್ನು ತಡವಾಗಿ ಸೇರಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಹಾಗೂ ಆಯುಧ ವಶಪಡಿಸಿಕೊಂಡ ಪ್ರಕ್ರಿಯೆಗಳಲ್ಲಿ ಅನುಮಾನಗಳಿವೆ. ಕೇವಲ ಸಂಶಯದ ಆಧಾರದಲ್ಲಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದರು.

ಸಾರ್ವಜನಿಕ ಪ್ರತಿನಿಧಿಗಳಿಗೆ ಮತದಾರರ ಬಗ್ಗೆ ವಿಶೇಷ ಜವಾಬ್ದಾರಿಯಿರುತ್ತದೆ. ದೋಷನಿರ್ಣಯಕ್ಕೆ ತಡೆ ನೀಡದಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ಸುಪ್ರೀಂ ಕೋರ್ಟನ ಹಿಂದಿನ ತೀರ್ಪುಗಳನ್ನು ಹೈಕೋರ್ಟ ಉಲ್ಲೇಖಿಸಿದೆ.

ಸಾಮಾನ್ಯ ವ್ಯಕ್ತಿಯ ಜೀವನೋಪಾಯದ ಹಕ್ಕು ರಾಜಕಾರಣಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿಗಿಂತ ಕಡಿಮೆಯಲ್ಲ. ಮೇಲ್ಮನವಿಯ ಅಂತಿಮ ತೀರ್ಪು ಬರುವವರೆಗೆ ಅರ್ಜಿದಾರರು ಸಾಮಾನ್ಯ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಸೂಕ್ತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನಂದನ್‌ಲಾಲ್ ರೈ ಅವರು ಈ ಹಿಂದೆ ದಿವಂಗತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ ಅನ್ಸಾರಿ ಅವರೊಂದಿಗೆ ನಂಟು ಹೊಂದಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಆದರೆ, ಹೈಕೋರ್ಟ ನೀಡಿರುವುದು ಮಧ್ಯಂತರ ತಡೆಯಾಗಿದ್ದು, ಇದು ಪ್ರಕರಣದಿಂದ ಖುಲಾಸೆಗೊಳಿಸಿದ ಆದೇಶವಲ್ಲ. ಮೇಲ್ಮನವಿಯ ಅಂತಿಮ ತೀರ್ಪು ಇನ್ನೂ ಬಾಕಿಯಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ