LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆ ಸೆರೆ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿದ್ದ ಮಹಿಳೆ ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಫೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದುಕೊಂಡರೂ, ಮತ್ತೆ 1 ಕೋಟಿ ರೂ. ಕೊಡಬೇಕೆಂದು ತನ್ನ ಸಹಚರರ ಜೊತೆಗೂಡಿ ಬೆದರಿಕೆ ಮುಂದುವರಿಸಿದ್ದಳು. ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸ್ಫೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.



ಇದೇ ಸ್ವಾಮೀಜಿ ಮೇಲೆ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಬ್ಲ್ಯಾಕ್​ಮೇಲ್ ಕಾಟ ಎದುರಾಗಿದೆ. ಬ್ಲ್ಯಾಕ್​ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026