Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸಕಲೇಶಪುರದಲ್ಲಿ ಮಹಿಳೆ ಹತ್ಯೆ: ಅಕ್ರಮ ಸಂಬಂಧದ ದುರಂತ ಅಂತ್ಯ

ಹಾಸನ, ಮೇ 3: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲೇ ದುರ್ಘಟನೆ ಸಂಭವಿಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೃತ ಮಹಿಳೆಯನ್ನು ರಮ್ಯಾ .ಆರ್. (35) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಅದೇ ಗ್ರಾಮದ ಚಂದ್ರ (41) ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ರಮ್ಯಾ ಮತ್ತು ಚಂದ್ರ ನಡುವೆ ಕಳೆದ ಕೆಲವು ವರ್ಷಗಳಿಂದ ಆತ್ಮೀಯ ಸಂಬಂಧವಿತ್ತು ಎಂದು ತಿಳಿದುಬಂದಿದೆ.

ರಮ್ಯಾಳ ಪತಿ ಉಮೇಶ್ ಸುಮಾರು ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ನಂತರ ಅವರು ಜೀವನೋಪಾಯಕ್ಕಾಗಿ ಬೆಂಗಳೂರಿನ ಜೆ.ಪಿ.ನಗರ ಪ್ರದೇಶದ ಮನೆಯೊಂದರಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು. ಇದೇ ಅವಧಿಯಲ್ಲಿ ಚಂದ್ರನೊಂದಿಗೆ ಅವರ ಸಂಬಂಧ ಬೆಳೆದು ಬಂದಿತ್ತು ಎನ್ನಲಾಗಿದೆ.

ಏಪ್ರಿಲ್ 28ರಂದು ರಮ್ಯಾಳ ಅತ್ತೆ ಕಾಳಮ್ಮ ನಿಧನರಾದ ಹಿನ್ನೆಲೆಯಲ್ಲಿ, ಅವರು ಬೆಂಗಳೂರಿನಿಂದ ತಮ್ಮ ಊರಾದ ಅತ್ತಿಹಳ್ಳಿಗೆ ಆಗಮಿಸಿದ್ದರು. ಅಂತ್ಯಸಂಸ್ಕಾರ ಕಾರ್ಯಗಳಲ್ಲಿ ಭಾಗವಹಿಸಿ, ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ವೇಳೆ ಮನೆಗೆ ಬಂದ ಚಂದ್ರ, ರಮ್ಯಾಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ವೇಳೆ ಚಂದ್ರ ಆಕ್ರೋಶಗೊಂಡು ರಮ್ಯಾಳ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ರಮ್ಯಾಳಿಗೆ ಎರಡು ದಿನಗಳ ಬಳಿಕ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಯನ್ನು ಬಂಧಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಅಕ್ರಮ ಸಂಬಂಧಗಳ ಪರಿಣಾಮವಾಗಿ ಉಂಟಾಗುವ ಸಾಮಾಜಿಕ ಮತ್ತು ವೈಯಕ್ತಿಕ ಸಮಸ್ಯೆಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಮಹಿಳೆಯ ಮೇಲೆ ನಡೆದ ಹಿಂಸಾಚಾರ ಗ್ರಾಮಸ್ಥರಲ್ಲಿ ಆಕ್ರೋಶ ಹುಟ್ಟಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದು, ಹಲ್ಲೆಯ ನಿಖರ ಕಾರಣಗಳು ಹಾಗೂ ಘಟನೆಗೆ ಸಂಬಂಧಿಸಿದ ಇತರೆ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ