LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆ

 ಬೆಂಗಳೂರು: ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಲಾಯಿತು.


ನಗರದ ನಯನ ಸಭಾಂಗಣದಲ್ಲಿ  ಸಮಾಜದ ಸಾಧಕ ಮಹಿಳೆಯರನ್ನು  ಪ್ರೋತ್ಸಾಹಿಸುವ,ಗುರುತಿಸುವ ಸಲುವಾಗಿ ಮೊದಲ ಭಾರಿಗೆ ಬೆಂಗಳೂರಿನಲ್ಲಿ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು DYSP  ಮೀನಾಕ್ಷಿ  ಅವರು ಉದ್ಘಾಟನೆ ಮಾಡಿ ನಂತರ ಮಾತನಾಡಿ, ಆಧುನಿಕ ಕಾಲಕ್ಕೆ ತಕ್ಕಂತೆ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ, ಮಾಡಿದ್ದಾರೆ. ಅವರನ್ನು ಗುರುತಿಸುವ  ಕೆಲಸ ಮಾಡಬೇಕು, ವಿಶ್ವ ಕರ್ಮ ಸಮಾಜದಲ್ಲಿ ಸಾಕಷ್ಟು ಮಂದಿ ಸಾಧನೆ ಮಾಡಿರುವವರು ಇದ್ದಾರೆ ,ಮಾಡಿದ್ದಾರೆ. ಅದರ ಜಿತೆಗೆ ವಿದ್ಯಾವಂತರಾಗುವುದು ಬಹಳ ಮುಖ್ಯವಾಗಿದೆ. ಶಿಕ್ಷಣ ಪಡೆದರೆ ಏನುಬೇಕಾದರೂ ಕೆಲಸ ಮಾಡಬಹುದು. ಅದು ಅಸ್ರವಾಗಿ ಬಳಸಿಕೊಳ್ಳಬೇಕು ಎಂದು ಮಹಿಳೆಯರಿಗೆ ಕರೆ ನೀಡಿದರು.


ವಿಶ್ವ ಕರ್ಮ ಸಮಾಜದ ರಾಜ್ಯಾಕ್ಷರಾದ ಈಶ್ವರಾಚಾರ್ ,ಸಮಾಜದ ನಿಗಮ ಮಂಡಳಿ ಅಧ್ಯಕ್ಷರಾದ ಸುಜ್ಞಾನ ಮೂರ್ತಿ, ವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ. ಶೋಭಾ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಹಿಳೆಯರಾದ ಕುಸುಮಾ ನಾರಾಯಣಚಾರ್,ಕಾತ್ಯಾಯನಿ ರವೀಂದ್ರ,ನಾಗರತ್ನ,ಅಂಬಾಮಣಿ,ಸಿದ್ದರಾಜಮ್ಮಣ್ಣಿ ಅವರನ್ನು  ಗುರುತಿಸಿ ಸನ್ಮಾನ ಮಾಡಿ ಪ್ರೋತ್ಸಾಹಿಸಲಾಯಿತು.


ನಂತರ ಸಮಾಜದ ಅಧ್ಯಕ್ಷರಾದ ಶೋಭಾ ಅವರು ಮಾತನಾಡಿ, ವಿಶ್ವಕರ್ಮದಲ್ಲಿ ಎಲೆಮರೆ ಕಾಯಿಯಂತೆ ದುಡಿಯುತ್ತಿದ್ದಾರೆ.  ಹೀಗಾಗಿ ಸಾಕಷ್ಟು ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುರನ್ನು ಗುರುತಿಸಿ ಸನ್ಮಾನ ನಾಡಲಾಯಿತು. ಇದು ನಮ್ಮ ಮೊದಲ ಕಾರ್ಯಕ್ರಮವಾಗಿದೆ, ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಕ್ಕೂ ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ.


ಕಾರ್ಯಕ್ರಮದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಡಾ.ಕೆ.ಎನ್ ಗೀತಾ,ಕಾರ್ಯಾಧ್ಯಕ್ಷರಾದ ಕೃಷ್ಣವೇಣಿ,ಪ್ರಧಾನ ಕಾರ್ಯದರ್ಶಿ ಶೋಭಾ ನಟರಾಜ್, ಖಜಾಂಚಿ ಸುಧಾ ಬಸವರಾಜ್,ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಂಘದ ಪದಾಧಿಕಾರಿಗಳು, ವಿಶ್ವಕರ್ಮ ಕುಲಭಾಂದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ