LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಅಂತರಾಷ್ಟಿಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಹಿಳೆಯರು ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಹೊಂದಬೇಕು: ಪಲ್ಲವಿ.ಜಿ


ಬಳ್ಳಾರಿ,ಮಾ.13



ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಔದ್ಯೋಗಿಕವಾಗಿ ಅವಕಾಶಗಳನ್ನು ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ಹೇಳಿದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ “ಅಂತರಾಷ್ಟಿçÃಯ ಮಹಿಳಾ ದಿನಾಚರಣೆ’’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಮಹಿಳೆಯರನ್ನು ಪೂಜನೀಯ ಸ್ಥಾನದಲ್ಲಿರಿಸಿದ್ದರೂ, ಅವರನ್ನು ಹತ್ತಿಕ್ಕುವುದು ಅನಾದಿ ಕಾಲದಿಂದಲೂ ನಡೆಯುತ್ತಿದೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪುರುಷ ಪ್ರಧಾನ ದೇಶದಲ್ಲಿ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.

ಶಿಕ್ಷಣ ವಂಚಿತ ಪೋಷಕರ ಮಕ್ಕಳ ಶಿಕ್ಷಣಕ್ಕಾಗಿ ಶೇ.10 ಮೀಸಲಾತಿ ಸರ್ಕಾರ ಕಲ್ಪಿಸಿದೆ. ಇದರ ಸದುಪಯೋಗವಾಗಬೇಕು. ಮಹಿಳೆಯರು ಪ್ರಶ್ನಿಸುವ ಮನೋಭಾವ ಬೆಳಸಿಕೊಂಡಲ್ಲಿ ವೈಚಾರಿಕವಾಗಿ ಮುಂದೆ ಬರುತ್ತಾರೆ ಎಂದರು.

ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್.ರುದ್ರೇಶ್ ಅವರು ಮಾತನಾಡಿ, ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಗೆ ಸೀಮಿತವಾಗದೇ ಸಮಾಜಮುಖಿಯಾಗಿ ಬೆಳೆಯಬೇಕು. ಸಾವಿತ್ರಿಬಾಯಿ ಫುಲೆ, ಕಿತ್ತೂರು ರಾಣಿ ಚನ್ನಮ್ಮ, ಒನಕೆ ಓಬವ್ವ, ಮದರ್ ಥೆರೇಸಾ, ಅಕ್ಕಮಹಾದೇವಿಯವರ ಚಿಂತನೆಗಳು ಇಂದಿನ ಮಹಿಳೆಯರಿಗೆ ಅದರ್ಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಮಾಜದ ವಿಜ್ಞಾನ ನಿಕಾಯದ ಡೀನರಾದ ಗೌರಿ ಮಾಣಿಕ್ ಮಾನಸ ಅವರು ಮಾತನಾಡಿ, ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಸಮಾಜದಿಂದ ಆಗಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಗಾಗಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ಇತ್ತೀಚೆಗೆ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಪದಕ, ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ನಂತರದಲ್ಲಿ ಜನಪದ ಸಂಗೀತ, ಹಾಸ್ಯ ಕಾರ್ಯಕ್ರಮ ಜರುಗಿದವು. ಡಾ.ಹೆಚ್.ತಿಪ್ಪೇಸ್ವಾಮಿ ನಿರೂಪಿಸಿದರು.

ಈ ಸಂದರ್ಭದಲ್ಲಿ ಮೌಲ್ಯಮಾಪನ ಕುಲಸಚಿವರಾದ ಡಾ.ಎನ್.ಎಂ. ಸಾಲಿ, ಡಾ.ಅಂಶುಮಾಲಿ, ಡಾ.ಗೋಪಾಲ್.ಎನ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು