LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ನ್ಯೂಮೋನಿಯಾ ದಿನಾಚರಣೆ


ಕೊಪ್ಪಳ ನವೆಂಬರ್ 13, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಭಾಗ್ಯನಗರ ವ್ಯಾಪ್ತಿಯ ನವನಗರದ ಅಂಗನವಾಡಿ ಕೇಂದ್ರದಲ್ಲಿ ಬುಧವಾರದಂದು ವಿಶ್ವ ನ್ಯೂಮೋನಿಯಾ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಅವರು ಮಾತನಾಡಿ, ಪ್ರತಿ ವರ್ಷ ನವೆಂಬರ್ 12 ರಂದು ವಿಶ್ವ ನ್ಯೂಮೋನಿಯಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ನ್ಯುಮೋನಿಯಾದಿಂದ ಉಂಟಾಗುವ ಸಾವು ನೋವುಗಳ ತಡೆಗಟ್ಟಲು ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ. ಈ ಕಾರ್ಯಕ್ರಮವನ್ನು ಜಾಗತಿಕ ಮಟ್ಟದಲ್ಲಿ 2009 ರಿಂದ ನಿರಂತವಾಗಿ ಪ್ರತಿ ವರ್ಷ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ರಕ್ಷಣಾ ವ್ಯವಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳು ಕೈಜೋಡಿಸಿ, ಜಾಗೃತಿ ಮೂಡಿಸಲಾಗುತ್ತದೆ. ಲಸಿಕೆ ಮತ್ತು ಅದರ ಗುಣಮಟ್ಟದ ಚಿಕಿತ್ಸೆಯ ಮಹತ್ವವನ್ನು ತಿಳಿಸುವುದಾಗಿದೆ. ನ್ಯೂಮೋನಿಯಾ ಒಂದು ಶ್ವಾಸಕೋಶದ ಸೋಂಕಾಗಿದ್ದು, ಶ್ವಾಸಕೋಶದಲ್ಲಿನ ಗಾಳಿಯ ಚೀಲಗಳಿಗೆ ಹರಡಿ, ಸೋಂಕಿನ ದ್ರವದಿಂದ ಶ್ವಾಸಕೋಶ ಬಲಹೀನಗೊಳ್ಳುತ್ತದೆ. ಇದು ಎರಡು ಶ್ವಾಸಕೋಶಗಳಿಗೂ ಹರಡಬಹುದು ಎಂದು ಹೇಳಿದರು.

ಯಾರಿಗಾದರೂ ಕೆಮ್ಮು ಮತ್ತು ಶೀತ ಹೆಚ್ಚಾಗುವುದು, ತೀವ್ರ ಉಸಿರಾಟದ ತೊಂದರೆ, ಪಕ್ಕೆಸೆಳೆತ, ತೀವ್ರ ರೀತಿಯ ಜ್ವರ, ಹಸಿವು ಆಗದೇ ಇರುವುದು, ವಾಕರಿಕೆ, ಅತಿಸಾರ, ನ್ಯುಮೋನಿಯಾ ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. 5 ವರ್ಷದೊಳಗಿನ ಮಕ್ಕಳಿಗೆ ನ್ಯೂಮೋನಿಯಾ ಖಾಯಿಲೆ ಹರಡದಂತೆ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತೆಯಾಗಿ ಮಗುವಿಗೆ 6 ತಿಂಗಳವರೆಗೆ ಕೇವಲ ತಾಯಿಯ ಎದೆಹಾಲು ಮಾತ್ರ ನೀಡಬೇಕು. 6 ತಿಂಗಳ ನಂತರ ಪೂರಕ ಪೌಷ್ಠಿಕ ಆಹಾರ ನೀಡುವುದು, ಕುಡಿಯುವ ನೀರನ್ನು ಮುಚ್ಚಿಡುವುದು, ಆಹಾರ ತಯಾರಿಸುವ ಮುನ್ನ, ಊಟದ ಮೊದಲು, ಶೌಚಾಲಯಕ್ಕೆ ಹೋಗಿ ಬಂದ ನಂತರ ಕೈಗಳಿಗೆ ಸೋಪು ಬಳಸಿ, ಕೈ ತೊಳೆದುಕೊಳ್ಳಬೇಕು. ಮಕ್ಕಳಿಗೆ ಸಕಾಲದಲ್ಲಿ ಪಿ.ಸಿ.ವಿ ಲಸಿಕೆ ಹಾಕಿಸಬೇಕು. ಮಕ್ಕಳ ಮೈತುಂಬಾ ಬಟ್ಟೆ ಹಾಕಬೇಕು. ಮಗುವನ್ನು ಬೆಚ್ಚಗಿಡುವುದು, ಕಲುಷಿತ ವಾತಾವರಣ, ಜನಸಂದಣಿ ಪ್ರದೇಶದಲ್ಲಿ ಅನಗತ್ಯವಾಗಿ ಹೋಗಬಾರದು. ವ್ಯಾಯಾಮ, ಯೋಗ, ಆರೋಗ್ಯಕರ ಅಭ್ಯಾಸಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರಿಗೆ ತಿಳಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಗೋವಿಂದಪ್ಪ ಇವರು ಆರ್.ಸಿ.ಹೆಚ್, ಕುಟುಂಬ ಕಲ್ಯಾಣ ಕಾರ್ಯಕ್ರಮ, ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿರ್ಮೂಲನೆ ಹಾಗೂ ಸೋಂಕಿತ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ ಕುರಿತು ವಿವರವಾಗಿ ಮಾತನಾಡಿದರು. ಸಮುದಾಯ ಆರೋಗ್ಯಾಧಿಕಾರಿ ಹೇಮಾ ಬಾಲ್ಯವಿವಾಹ ನಿಷೇಧ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯರಾದ ಸುಮಂಗಲ ಎಂ.ಡಿ, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರಾದ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆಯರಾದ ಸುಮಂಗಲ, ಆಶಾ ಕಾರ್ಯಕರ್ತೆಯರಾದ ಶೈನಾಜ್ ಬೇಗಂ, ವಾರ್ಡಿನ ಗುರು-ಹಿರಿಯರು, ತಾಯಂದಿರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು