Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯಡಗಾದಲ್ಲಿ 13 ಎಕರೆ ಕಬ್ಬು ಭಸ್ಮ: ಜೆಸ್ಕಾಂ ವಿರುದ್ಧ ತೇಲ್ಕೂರ್ ಆಕ್ರೋಶ

ಕಲಬುರಗಿ: ಸೇಡಂ ತಾಲೂಕಿನ ಯಡಗಾ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬಿನ ಬೆಳೆಗೆ ಬೆಂಕಿ ತಗುಲಿ ಸುಮಾರು 13 ಎಕರೆ ಪ್ರದೇಶದ ಕಬ್ಬು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿರುವ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ಸಂತ್ರಸ್ತ ರೈತರಿಗೆ ಪ್ರತಿ ಎಕರೆಗೆ ₹2 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಗುರುವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ತಂಡದೊಂದಿಗೆ  ಸೇಡಂ ತಾಲೂಕಿನ ಯಡಗಾ ಗ್ರಾಮಕ್ಕೆ ಭೇಟಿ ನೀಡಿ, ಬೆಂಕಿಯಿಂದ ಹಾನಿಗೊಳಗಾದ ಕಬ್ಬಿನ ಹೊಲಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿ ಗ್ರಾಮದ ರೈತರಾದ ಪಾರ್ವತಿ ಗಂಡ ಕಲ್ಲಪ್ಪ ತಾಡಪಳ್ಳಿ ಅವರ ಸರ್ವೆ ನಂ. 146ರ ನಾಲ್ಕು ಎಕರೆ, ಗೌಡಪ್ಪ ತಾಡಪಳ್ಳಿ ಅವರ ಸರ್ವೆ ನಂ. 147ರ ಮೂರು ಎಕರೆ ಹಾಗೂ ಪಂಡಿತರಾವ್ ಗೌಣೋರ ಅವರ ಸರ್ವೆ ನಂ. 145/1ರ ಆರು ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ. ಒಟ್ಟು 13 ಎಕರೆ ಕಬ್ಬು ಸಂಪೂರ್ಣ ನಾಶವಾಗಿದ್ದು, ರೈತರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ಗೆ ಕಾರಣರಾದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಹೊಣೆಗಾರಿಕೆ ನಿಗದಿಪಡಿಸಿ ಪ್ರಕರಣ ದಾಖಲಿಸಬೇಕು. ಅಲ್ಲದೆ, ಹಾನಿಗೊಳಗಾದ ರೈತರಿಗೆ ಜೆಸ್ಕಾಂ ಹಾಗೂ ಸರ್ಕಾರದಿಂದ ಪ್ರತಿ ಎಕರೆಗೆ ₹2 ಲಕ್ಷದಂತೆ ಪರಿಹಾರ ಕೊಡಿಸಬೇಕು ಎಂದು ತೇಲ್ಕೂರ್ ಒತ್ತಾಯಿಸಿದರು.

ಅಧಿಕಾರಿಗಳ ವಿರುದ್ಧ ಆಕ್ರೋಶ

“ಘಟನೆ ನಡೆದು 48 ಗಂಟೆಗಳು ಕಳೆದರೂ ತಹಶೀಲ್ದಾರ್ ಹಾಗೂ ಕೃಷಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿಲ್ಲ. ಬೆಳೆ ಕಳೆದುಕೊಂಡ ರೈತರಿಗೆ ಸಾಂತ್ವನ ಹೇಳುವ ಕನಿಷ್ಠ ಸೌಜನ್ಯವನ್ನೂ ಅಧಿಕಾರಿಗಳು ತೋರಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಶಾಸಕ ಶರಣಪ್ರಕಾಶ್ ಪಾಟೀಲ್ ಅವರ ಅವಧಿಯಲ್ಲಿ ಅಧಿಕಾರಿಗಳು ರೈತರೊಂದಿಗೆ ನಡೆದುಕೊಳ್ಳುತ್ತಿರುವುದು ರೈತ ವಿರೋಧಿ ಧೋರಣೆಯಾಗಿದೆ” ಎಂದು ರಾಜಕುಮಾರ ಪಾಟೀಲ್ ತೇಲ್ಕೂರ್ ಕಿಡಿಕಾರಿದರು.

ತಕ್ಷಣವೇ ತಹಶೀಲ್ದಾರ್, ಕೃಷಿ ಇಲಾಖೆ ಹಾಗೂ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಕುರಿತು ಪಂಚನಾಮೆ ನಡೆಸಬೇಕು. ರೈತರಿಗೆ ಉಂಟಾದ ನಷ್ಟಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರ ಪರವಾಗಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಸಂತ್ರಸ್ತ ರೈತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST