LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಡಿಕೆಶಿ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು'- ಯತ್ನಾಳ್

ಬೆಳಗಾವಿ:  ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, "ನನ್ನನ್ನ ಉಚ್ಛಾಟನೆ ಮಾಡಿದ ಸಂದರ್ಭದಲ್ಲಿ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಆಪರೇಷನ್ ಮಾಡುವ ಪ್ರಯತ್ನ ನಡೆದಿತ್ತು. ನಾನು ಪಕ್ಷದಲ್ಲಿದ್ರೆ ಇದು ಆಗಲ್ಲ ಅಂತ ಉಚ್ಛಾಟನೆ ಬಳಿಕ ಪ್ರಯತ್ನ ನಡೆದಿತ್ತು" ಎಂದರು.

"ವಿಜಯೇಂದ್ರ ಅವರು ತಾವು ಡಿಸಿಎಂ ಆಗಲು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಿಜೆಪಿಯವರೇ ಈ ಮಾತು ನನಗೆ ಹೇಳಿದ್ರು. ಆ ನಂತರ ಜೋಷಿಯವರು ಅಮಿತ್ ಶಾ ಅವರ ಸೂಚನೆ ಮೇರೆಗೆ ನಾವು ಯಾರನ್ನೂ ಸೇರಿಸಿಕೊಳ್ತಿಲ್ಲ ಅಂತ ಹೇಳಿದ್ರು. ಆದರೆ ನಿಜವಾಗಿಯೂ ಡಿಕೆಶಿಯನ್ನ ಬಿಜೆಪಿಗೆ ಕರೆತರುವ ಪ್ರಯತ್ನ ನಡೆದಿತ್ತು" ಎಂದು ತಿಳಿಸಿದರು.

"ಇದೇ ಡಿಸೆಂಬರ್ 19 ಕ್ಕೆ ಕಾಂಗ್ರೆಸ್‌ನವರು ದೆಹಲಿಗೆ ಹೋಗ್ತಿದ್ದಾರೆ. ಈಗ ಇಲ್ಲಿ ಗುಂಪು ಸಭೆಗಳು, ಡಿನ್ನರ್ ಸಭೆಗಳು ನಡೀತಿವೆ. ಬೆಂಬಲ ಯಾಚನೆ ಮಾಡಲು ಪ್ರತ್ಯೇಕ ಸಭೆಗಳು ನಡೀತಿವೆ. ಇನ್ನರ್ ಮತ್ತು ಡಿನ್ನರ್ ಸಭೆಗಳು ನಡೀತಿವೆ" ಎಂದು ವಾಗ್ದಾಳಿ ನಡೆಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026