LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಗುಡುಗು ಸಹಿತ ಮಳೆ.!

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಕಲಬುರಗಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಮುಂದುವರಿಯಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲು ಒಣ ಹವೆ ಇರಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026