ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!
ಬೆಂಗಳೂರು: ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳುರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಜಿಲ್ಲೆಗಳಲ್ಲಿ ಆಗಸ್ಟ್ 19ರವರೆಗೂ ಮಳೆಯಾಗಲಿದ್ದು, ಬಳಿಕ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಲಿದೆ. ರಾಮನಗರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ಕೋಲಾರ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.