ಜೂನ್ 11 ರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.! ಹವಾಮಾನ ಇಲಾಖೆ.!
ಬೆಂಗಳೂರು: ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಗದಿತ ಅವಧಿಗಿಂತ ಮೊದಲೇ ರಾಜ್ಯಕ್ಕೆ ಕಾಲಿಟ್ಟು ಆರಂಭದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದ್ದ ಮುಂಗಾರು ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಸೋಮವಾರದಿಂದ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆಯಿದ್ದು, ಜೂನ್ 11ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12ರಂದು ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.