Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಯೋಗ ತರಬೇತಿ ಮತ್ತು ಪ್ರಚಾರ ಜಾಥಾ 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
ಚಿತ್ರದುರ್ಗ ತಾಲೂಕಿನ ಹಿರೇಗುಂಟದೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟೀಯ ಆಯುಷ್ಮಾನ್ ಆರೋಗ್ಯ ಅಭಿಯಾನದ ಅಡಿಯಲ್ಲಿ ಉಚಿತ ಯೋಗ ಚಿಕಿತ್ಸಾ ಸೌಲಭ್ಯ ಪ್ರಾರಂಭಿಸಿದ್ದು ಅದರ ಪ್ರಚಾರದ ಅಂಗವಾಗಿ ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಶನಿವಾರ ಗ್ರಾಮದ ತರಳಬಾಳು ಶ್ರೀ ದ್ಯಾಮಲಾಂಬಿಕಾ ಪ್ರೌಢಶಾಲಾ ಮಕ್ಕಳಿಗೆ ಉಚಿತ ಯೋಗ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ ಗ್ರಾಮದ ಬೀದಿಗಳಲ್ಲಿ  ಶಾಲಾ ಮಕ್ಕಳು ಹಾಗೂ ಶಿಕ್ಷಕರ ಸಹಯೋಗದಲ್ಲಿ  ಯೋಗ ಪ್ರಚಾರ ಜಾಥಾ ಹಮ್ಮಿಕೊಳ್ಳಲಾಗಿತ್ತು.

 ಯೋಗ ತರಬೇತಿ ಮತ್ತು ಯೋಗ ಪ್ರಚಾರ ಜಾತದ ನೇತೃತ್ವ ವಹಿಸಿ ಮಾತನಾಡಿದ ಯೋಗ ತರಬೇತಿದಾರ ರವಿ ಕೆ ಅಂಬೇಕರ್ ಮಾತನಾಡಿ   ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಳಿಕ ಯೋಗಾಭ್ಯಾಸ ಜಾಗತಿಕವಾಗಿ ಮಾತ್ರವಲ್ಲದೆ, ಭಾರತದಲ್ಲೂ ಹೆಚ್ಚು ಪ್ರಾಮುಖ್ಯ ಪಡೆಯಲಾರಂಭಿಸಿದೆ. ಅಧಿಕ ರಕ್ತದೊತ್ತಡ, ಮಧು ಮೇಹ, ಕ್ಯಾನ್ಸರ್‌ಮತ್ತಿತರ ಅಸಾಂಕ್ರಾಮಿಕ ಕಾಯಿಲೆಗಳನ್ನು ತಡೆಯುವುದಕ್ಕಾಗಿ ಉಚಿತ ಯೋಗಾಭ್ಯಾಸವನ್ನು ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ ಆರಂಭಿಸಿರುವುದು ಈ ನಿಟ್ಟಿನಲ್ಲಿ ಹೊಸ ಹೆಜ್ಜೆ.

ಅದೇ ರೀತಿ ಹಿರೇಗುಂಟನೂರು ಗ್ರಾಮದ ಸರ್ಕಾರಿ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮಸ್ಥರಿಗಾಗಿ ಉಚಿತ ಯೋಗ ತರಬೇತಿ ವಿಭಾಗ ಪ್ರಾರಂಭಿಸಲಾಗಿದೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಶಾಲೆಯ ಮುಖ್ಯಯೊಪಾಧ್ಯಾಯ ಧನಂಜಯ್ ಟಿ ಮಾತನಾಡಿ ರಾಷ್ಟ್ರೀಯ ಅಯುಷ್ಮಾನ್ ಯೋಜಯನೆ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಅಯೋಗ್ಯ ಕೇಂದ್ರಗಳ ಮೂಲಕ ಗ್ರಾಮೀಣ ಪ್ರದೇಶಗಳ ಜನರಿಗೆ ಹಾಗೂ ಗ್ರಾಮೀಣ ಶಾಲೆಗಳ ಮಕ್ಕಳಿಗೆ ಉಚಿತವಾಗಿ ಯೋಗ ತರಬೇತಿ ನೀಡುತ್ತಿರುವುದು  ಜನರ ಅರೋಗ್ಯ ಸುಧಾರಣೆಗೆ ಸಹಕರಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.

 ಹಿರೇಗುಂಟನೂರು ದ್ಯಾಮಲಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಕ ಪುರುಷೋತ್ತಮ ಪಿ. ಹಾಗೂ ಶಿಕ್ಷಕರಾದ ತಿಪ್ಪೇಸ್ವಾಮಿ, ಚಿಕ್ದುರಪ್ಪನವರ ಸಿದ್ದನಗೌಡ, ವಿದ್ಯಾಶ್ರೀ, ಮರುಳುಸಿದ್ದಯ್ಯ ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ