ಮೈಸೂರು :
ವರುಣ ಮತ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಅವರ ಸ್ಮಿತಾ ರಾಕೇಶ್ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
ವರುಣ ಮತಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮಾವ ಸಿದ್ದರಾಮಯ್ಯ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ನಮ್ಮ ಮಾವನವರನ್ನು ಈ ಬಾರಿ ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಿ ಎಂದು ಅವರು ಮನವಿ ಮಾಡುತ್ತಿರುವುದು ಗಮನ ಸೆಳೆದಿದೆ.
ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಸಹ ಪ್ರಚಾರಕ್ಕಿಳಿದಿದ್ದರು. ಸಿದ್ದರಾಮಯ್ಯ ಅವರ ಪುತ್ರ ಹಾಗೂ ಹಾಲಿ ಶಾಸಕರಾಗಿರುವ ಯತೀಂದ್ರ ಕ್ಷೇತ್ರದಲ್ಲಿ ಬೀಡು ಬಿಟ್ಟು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.