Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪುನೀತ್‌ ರಾಜ್‌ ಪೋಟೋ ಇಡುವ ವಿಚಾರಕ್ಕೆ ಗುಂಪು ಘರ್ಷಣೆ -ಯುವಕನ ಕೊಲೆ

ಸುದ್ದಿಮೂಲ ವಾರ್ತೆ

ಮೈಸೂರು, ಜು.10:ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ ಪೋಟೋವನ್ನು ಮೆರವಣಿಗೆ ವೇಳೆ ಇಡುವ ವಿಚಾರಕ್ಕೆ ಸಂಬಂಧಿಸಿದಂತೆ ಗುಂಪು ಘರ್ಷಣೆ ನಡೆದು ಯುವಕನೊಬ್ಬನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಟೀ ನರಸೀಪುರ ಪಟ್ಟಣದ ಅಗ್ನಿಶಾಮಕ ದಳದ ಕಚೇರಿಯ ಮಾರುತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.

ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32)ವರ್ಷ ಕೊಲೆಯಾದ ಯುವಕ. ಅವರು ಯುವ ಬ್ರಿಗೇಡ್ ನ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ನಡೆದ ಹನುಮ ಜಯಂತಿ ವೇಳೆ ಮೆರವಣಿಗೆಯಲ್ಲಿ ಪುನೀತ್ ರಾಜಕುಮಾರ್ ಫೋಟೋ ಇಡುವ ಸಂಬಂಧ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಮಧ್ಯಸ್ಥಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.

 

ಎರಡು ಗುಂಪುಗಳ ನಡುವಿನ ಗಲಾಟೆ ನಡೆದು ಆರೋಪಿತ ಮಣಿ ಮತ್ತು ಅವರ ತಂಡ ವೇಣುಗೋಪಾಲ್ ಮೇಲೆ ಹಲ್ಲೆ ನಡೆಸಿತ್ತು. ಅಲ್ಲೂ ಕೂಡ ಕೆಲವರು ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು.

ಮತ್ತೆ ಮಣಿ ಉರುಫ್ ಕೋಳಿ ಮಣಿ ಎಂಬುವನು ವೇಣುಗೋಪಾಲ್ ಗೆ ಕರೆಮಾಡಿ ಮಾತನಾಡಲು ಆಹ್ವಾನಿಸಿದ್ದನು‌. ಆದರೆ, ವೇಣುಗೋಪಾಲ್ ಹೋಗಲು ನಿರಾಕರಿಸಿದ್ದನು. ನಂತರ ವೇಣುಗೋಪಾಲ್ ತನ್ನ ಸ್ನೇಹಿತರ ಜೊತೆಗೂಡಿ ಸರ್ವಿಸ್ ಸ್ಟೇಷನ್ ಬಳಿಗೆ ಬಂದಾಗ ಏಕಾಏಕಿ ಬಾಟಲಿನಿಂದ ಹೊಡೆದು, ಹೊಟ್ಟೆಗೆ ಬಾಟಲಿಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ಸಂಬಂಧ ಪಟ್ಟಣದ ನಿವಾಸಿಗಳಾದ ಮಣಿಕಂಠ ಉ ಕೋಳಿ ಮಣಿ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿತರ ಇಬ್ಬರು ಪೊಲೀಸರಿಗೆ ಶರಣಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಪರಿಶೀಲಿಸಿದರು. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ