Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಅಭಿಯಾನ

 

ವಿಜಯಪುರ, ಸೆ.೧೯: ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನರ ಪಾತ್ರ ಮಹತ್ವದ್ದಾಗಿದ್ದು, ೧೮ ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಮತದಾನದ ಹಕ್ಕು ಚಲಾಯಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ  ಉಪ ನಿರ್ದೇಶಕ ಕೆ.ಎ. ಉಪ್ಪಾರ ಕರೆ ನೀಡಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಕ್ಲಬ್ (ಇಎಲ್‌ಸಿ) ವತಿಯಿಂದ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-೨೦೨೬ ಹಾಗೂ ಯುವ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮತದಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದ್ದು, ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆ ಹಾಗೂ ಮತದಾನದ ಮಹತ್ವದ ಕುರಿತು ಅರಿವು ಹೊಂದಬೇಕು. ಚುನಾವಣಾ ಆಯೋಗದ ಸಂದೇಶ ಮತದಾರರ ಪಟ್ಟಿಯಿಂದ ಯಾರೂ ಹೊರ ಗುಳಿಯಬಾರದು (ನೊ ವೋಟರ್ ಲೆಪ್ಟ್ ಬಿ ಹೈಂಡ್ ) ಆಶಯದಂತೆ ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು ಎಂದು ತಿಳಿಸಿದರು. ಜಿಲ್ಲಾ ಇಎಲ್‌ಸಿ ನೋಡಲ್ ಅಧಿಕಾರಿ ಎಂ.ಬಿ. ರಜಪೂತ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಆರ್) ಪ್ರಕ್ರಿಯೆಯ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ೧೮ ವರ್ಷ ಪೂರ್ಣಗೊಂಡ ಹಾಗೂ ನಿಗದಿತ ಅರ್ಹತಾ ದಿನಾಂಕದೊಳಗೆ ೧೮ ವರ್ಷ ಪೂರೈಸಲಿರುವವರು ನಮೂನೆ-೬ರ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳುವ ವಿಧಾನ ಹಾಗೂ ಸಿಟಿಜನ್ ಸರ್ವಿಸ್ ಫೊರ್ಟಲ್ ಹಾಗೂ ಮತ್ತು ಇಸಿಐ ನೆಟ್ ಆಪ್  ಬಳಕೆಯ ಕುರಿತು ಮಾಹಿತಿ ನೀಡಿದರು.  ಕಾಲೇಜಿನ ಪ್ರಾಚಾರ್ಯ ಪಿ.ಎ. ಮೇತ್ರಿ ಮಾತನಾಡಿ, ಮತದಾರರ ಸಾಕ್ಷರತೆ ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯವಾಗಿದ್ದು, ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಇತರರಲ್ಲಿಯೂ ಮತದಾನದ ಕುರಿತು ಜಾಗೃತಿ ಮೂಡಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಕಾಲೇಜಿನ ಸುಮಾರು ೩೦ ಅರ್ಹ ವಿದ್ಯಾರ್ಥಿಗಳ ನಮೂನೆ-೬ ಭರ್ತಿ ಮಾಡಿಸಿ ಸ್ಥಳದಲ್ಲಿಯೇ ನೋಂದಣಿ ಪ್ರಕ್ರಿಯೆ ಕೈಗೊಳ್ಳಲಾಯಿತು. ಹಿರಿಯ ಉಪನ್ಯಾಸಕರಾದ ಸಿ.ಟಿ.ಯಾಳಗಿ ಹಾಗೂ ಬಿ.ಎಸ್.ಗೌರಿ,ಎಸ್.ಸಿ. ತೋಳನೂರ,ಆರ್.ಸಿ. ಹಿರೇಮಠ,ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ