Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Health & Fitness

ಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ನಶಾ ಮುಕ್ತ ಭಾರತ ಮಾಡಲು ಪ್ರತಿಯೊಬ್ಬ ಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. 

ಅವರು ಮೂಡಲಗಿ ಪಟ್ಟಣದ ಶ್ರೀ ಶ್ರೀಪಾದಭೋದ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಭಾರತ ಸರ್ಕಾರದ ಮೈ ಭಾರತ್ ಕೇಂದ್ರ ಬೆಳಗಾವಿ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಶ್ರೀಪಾದಭೋದ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೂಡಲಗಿ ಏನ್ ಎಸ್ ಎಸ್ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ನಶಾ ಮುಕ್ತ ವಿಕಸಿತ ಭಾರತ ಕಾರ್ಯಕ್ರಮದ ವಿವಿಧ ಸ್ಪರ್ಧೆಯ ಸಮಾರಂಭ ಉದ್ಘಾಟಿಸಿ ಮಾತನಾಡಿ ಗುಟ್ಕಾ ಮಟಕಾದಂತ ಚಟಗಳಿಂದ ದೂರ ಇರಬೇಕು ಎಂದು ಯುವಕರಿಗೆ ಕರೆ ನೀಡಿದರು.

ಬೆಳಗಾವಿ ಮೈ ಭಾರತ ಕೇಂದ್ರದ ಬೆಳಗಾವಿ ಜಿಲ್ಲಾ ಯುವ ಅಧಿಕಾರಿ ಸಂಗ್ರಾಮ ಸಾವಂತ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ ಕೇಂದ್ರದ ಮೂಲಕ ದೇಶದ ಯುವಜನರಿಗೆ ಹಲವಾರು ಯೋಜನೆಗಳು, ವಿವಿಧ ಜನಜಾಗೃತಿ  ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಇದರ ಸದುಪಯೋಗವನ್ನು ನಮ್ಮ ಭಾಗದ ಯುವ ಜನತೆ ಯುವಕ ಸಂಘಗಳ ಮೂಲಕ ನಿರಂತರ ಕಾರ್ಯ ಮಾಡಬೇಕು ಎಂದು  ಹೇಳಿದರು.

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ ನಮ್ಮ ಗ್ರಾಮೀಣ ಭಾಗದ ಯುವಕರು ಶ್ರದ್ದೆ ಭಕ್ತಿ ತಾಳ್ಮೆ ನಿಸ್ವಾರ್ಥದಿಂದ ಕಾರ್ಯ ಮಾಡಿದರೆ ನಮ್ಮ ದೇಶ ಪ್ರಗತಿಯತ್ತ ಸಾಗುತ್ತದೆ ಎಂದು ಹೇಳಿದರು. 

ಮೂಡಲಗಿಯ ಹಿರಿಯ ಸಾಹಿತಿಗಳಾದ ಬಾಲಶೇಖರ ಬಂದಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಹೇಶ ಕಂಬಾರ ಮಾತನಾಡಿ ಕಾಲೇಜಿನಲ್ಲಿ ಇಂತಹ ಒಳ್ಳೆಯ ಕಾರ್ಯಕ್ರಮವನ್ನು ಮಾಡಿದ ಬೆಳಗಾವಿ ಮೈ ಭಾರತ್ ಕೇಂದ್ರಕ್ಕೆ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಐಕ್ಯೂಎಸಿ ಸಂಯೋಜಕರಾದ ಚೇತನರಾಜ ಬಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಆರ್ ಐ ಆಸಂಗಿ, ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ ಗೊಡ್ಯಾಗೋಳ, ಗೋಪಾಲ ಗಡ್ಡೆಕಾರ, ಅಬ್ದುಲ್ ಮಿರ್ಜಾನಾಯಕ, ಮಲ್ಲಯ್ಯ ಕರಡಿ, ಆದರ್ಶ್ ಪೂಜೇರಿ, ಸರಸ್ವತಿ ರಬಕವಿ, ಸುಜಾತಾ ಪುಡ್ಲಕಟ್ಟಿ, ಮಲ್ಲಿಕಾರ್ಜುನ ಸಜ್ಜನವರ, ಸುರೇಶಬಾಬು ಮೋಹನಕುಮಾರ್, ಮಧುಸೂದನ, ಶಿವಾನಂದ ಹಿರೇಮಠ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೆಡಲ್ ಮತ್ತು ಪ್ರಮಾಣ ಪತ್ರಗಳನ್ನು ನೀಡಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಶಿವಕುಮಾರ್ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ